ADVERTISEMENT

ದಾವಣಗೆರೆ | ಹೆಲ್ತ್ ಕಪ್‌: ಬಿಬಿಎಂಪಿ ತಂಡ ಪ್ರಥಮ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2024, 5:49 IST
Last Updated 19 ಫೆಬ್ರುವರಿ 2024, 5:49 IST
ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹೆಲ್ತ್ ಇಲೆವೆನ್ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಬೆಂಗಳೂರು ಬಿಬಿಎಂಪಿ ತಂಡ ಪ್ರಥಮ ಬಹುಮಾನ ಪಡೆಯಿತು –ಪ್ರಜಾವಾಣಿ ಚಿತ್ರ
ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹೆಲ್ತ್ ಇಲೆವೆನ್ ಕ್ರಿಕೆಟರ್ಸ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಬೆಂಗಳೂರು ಬಿಬಿಎಂಪಿ ತಂಡ ಪ್ರಥಮ ಬಹುಮಾನ ಪಡೆಯಿತು –ಪ್ರಜಾವಾಣಿ ಚಿತ್ರ   

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹೆಲ್ತ್ 11 ಕ್ರಿಕೆಟರ್ಸ್ ಸಂಯುಕ್ತಾಶ್ರಯದಲ್ಲಿ ಭಾನುವಾರ ಮುಕ್ತಾಯಗೊಂಡ ರಾಜ್ಯಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಯಲ್ಲಿ ಬೆಂಗಳೂರಿನ ಬಿಬಿಎಂಪಿ ತಂಡ ಪ್ರಥಮ ಬಹುಮಾನ ಪಡೆಯಿತು.

ಮೈಸೂರಿನ ಎನ್‌ಟಿಇಪಿ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿದರೆ ಹಾಸನ ಹೋಯ್ಸಳ ಹಾಗೂ ಹೆಲ್ತ್ ಇಲವೆನ್ ದಾವಣಗೆರೆ ತಂಡಗಳು ಕ್ರಮವಾಗಿ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದವು.

‘ಹೆಲ್ತ್ ಕಪ್–2024’ರಲ್ಲಿ ಟೂರ್ನಿಯಲ್ಲಿ ಪ್ರಥಮ ಸ್ಥಾನ ಪಡೆದ ಬಿಬಿಎಂಪಿ ತಂಡಕ್ಕೆ ₹30,000 ಹಾಗೂ ರನ್ನರ್ ಅಪ್ ಸ್ಥಾನ ಪಡೆದ ಮೈಸೂರಿನ ಇನ್‌ಟಿಇಪಿ ತಂಡಕ್ಕೆ ₹15,000 ನಗದು ಬಹುಮಾನ ವಿತರಿಸಲಾಯಿತು.

ADVERTISEMENT

ಎರಡು ದಿನಗಳ ಕಾಲ ನಡೆದ ಲೀಗ್ ಕಂ ನಾಟೌಟ್ ಪಂದ್ಯದಲ್ಲಿ ರಾಜ್ಯದ ವಿವಿಧ ಭಾಗಗಳಿಂದ 19 ತಂಡಗಳು ಪಾಲ್ಗೊಂಡಿದ್ದವು. 43 ಪಂದ್ಯಗಳು ನಡೆದವು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಬಹುಮಾನ ವಿತರಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್, ಎನ್‌ವಿಬಿಡಿಸಿಪಿ ಅಧಿಕಾರಿ ಡಾ.ಗಂಗಾಧರ್, ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಡಾ. ಮಂಜುನಾಥ್ ಎಸ್.ಪಾಟೀಲ್, ಆರ್‌ಸಿಎಚ್ ಅಧಿಕಾರಿ ಡಾ.ರೇಣುಕಾರಾಧ್ಯ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರುದ್ರಸ್ವಾಮಿ, ಜಿಲ್ಲಾ ಐಇಸಿ ಅಧಿಕಾರಿ ಡಾ.ಸುರೇಶ್ ಬಾರ್ಕಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ದೇವರಾಜ ಪಿ.ಪಟಗೆ ಇದ್ದರು.

ನಾಲ್ಕನೇ ಬಹುಮಾನ ಪಡೆದ ಹೆಲ್ತ್ ಇಲೆವೆನ್ ದಾವಣಗೆರೆ ತಂಡ –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.