ADVERTISEMENT

ಸಂತೇಬೆನ್ನೂರು | ಭಾರಿ ಮಳೆ: ನೆಲಕ್ಕುರುಳಿದ ವಿದ್ಯುತ್ ಕಂಬಗಳು

​ಪ್ರಜಾವಾಣಿ ವಾರ್ತೆ
Published 21 ಮೇ 2024, 14:17 IST
Last Updated 21 ಮೇ 2024, 14:17 IST
ಸಂತೇಬೆನ್ನೂರು ಸಮೀಪದ ದೊಡ್ಡಬ್ಬಿಗೆರೆ ಗ್ರಾಮದಲ್ಲಿ ಸೋಮವಾರ ಸುರಿದ ಮಳೆಗೆ ವಿದ್ಯುತ್ ಕಂಬ ಉರುಳಿದೆ
ಸಂತೇಬೆನ್ನೂರು ಸಮೀಪದ ದೊಡ್ಡಬ್ಬಿಗೆರೆ ಗ್ರಾಮದಲ್ಲಿ ಸೋಮವಾರ ಸುರಿದ ಮಳೆಗೆ ವಿದ್ಯುತ್ ಕಂಬ ಉರುಳಿದೆ   

ಸಂತೇಬೆನ್ನೂರು: ಸಮೀಪದ ದೊಡ್ಡಬ್ಬಿಗೆರೆ ಗ್ರಾಮದಲ್ಲಿ ಸೋಮವಾರ ಸುರಿದ ಭಾರಿ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಕೆರೆಗಳಿಗೆ ಸಾಕಷ್ಟು ನೀರು ಹರಿದಿದೆ. ಭತ್ತದ ಬೆಳೆಗೆ ಹಾನಿ ಆಗಿದೆ.

ದೊಡ್ಡಬ್ಬಿಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಬಳಿಯ ಮರದ ಬೃಹತ್‌ ಕೊಂಬೆ ವಿದ್ಯುತ್ ಕಂಬದ ಬಿದ್ದ ಪರಿಣಾಮ ನಾಲ್ಕು ವಿದ್ಯುತ್ ಕಂಬಗಳು ಉರುಳಿವೆ. ವಿದ್ಯುತ್ ಪ್ರವಹಿಸಿತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು, ಬೆಸ್ಕಾಂ ಕಚೇರಿಗೆ ಕರೆ ಮಾಹಿತಿ ನೀಡಿದರು. ವಿದ್ಯುತ್ ಸರಬರಾಜು ಕಡಿತಗೊಳಿಸಿದ್ದರಿಂದ ಸಂಭಾವ್ಯ ಅಪಾಯ ತಪ್ಪಿತು.

ಹೋಬಳಿ ವ್ಯಾಪ್ತಿಯಲ್ಲಿ ಬಹುತೇಕ ಕೆರೆಗಳಿಗೆ ನೀರು ಹರಿದಿದೆ. ಅಲ್ಲಲ್ಲಿ ಭತ್ತದ ಬೆಳೆಗೆ ಹಾನಿ ಸಂಭವಿಸಿದೆ. ದೊಡ್ಡೇರಿಕಟ್ಟೆ ಬೃಹತ್ ಗೋಕಟ್ಟೆ ತುಂಬಿದೆ. ಒಟ್ಟಾರೆ 8.3 ಸೆಂ.ಮೀ. ಮಳೆ ಬಿದ್ದಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.