ADVERTISEMENT

ಹೊನ್ನಾಳಿ: ಕರಾಟೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2024, 13:09 IST
Last Updated 16 ನವೆಂಬರ್ 2024, 13:09 IST
ಕರಾಟೆ ಸ್ಪರ್ಧೇಯ ಕುಡೊ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹೊನ್ನಾಳಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿ ಎಸ್. ಧೀರಜ್ ಅವರನ್ನು ಅಭಿನಂದಿಸಲಾಯಿತು
ಕರಾಟೆ ಸ್ಪರ್ಧೇಯ ಕುಡೊ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹೊನ್ನಾಳಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿ ಎಸ್. ಧೀರಜ್ ಅವರನ್ನು ಅಭಿನಂದಿಸಲಾಯಿತು   

ಹೊನ್ನಾಳಿ: ಪಟ್ಟಣದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಎಸ್. ಧೀರಜ್ ಅವರು ಕರಾಟೆ ಸ್ಪರ್ಧೆಯ ಕೂಡೊ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ಶನಿವಾರ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಯನ್ನು ಗೌರವಿಸಲಾಯಿತು. ತರಬೇತಿ ನೀಡಿದ್ದ ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಶೇಖರ್ ಹೆಗಡೆ ಅವರನ್ನು  ಅಭಿನಂದಿಸಲಾಯಿತು. 

ಸಂಸ್ಥೆಯ ಅಧ್ಯಕ್ಷ ಕಿರಣ್ ರಾಯ್ಕರ್ ಹಾಗೂ ಕಾರ್ಯದರ್ಶಿ ಜೆ.ಕೆ. ಬಾಬಣ್ಣ ಇದ್ದರು. 

ADVERTISEMENT

ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸ್ನೇಹಾ ಅವರು 400 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 4x100 ರಿಲೇಯಲ್ಲಿ ಎಸ್.ಎಸ್. ದೀಪಿಕಾ, ಎಂ.ಆರ್. ವಿಶಾಖಾ, ಎಂ.ಎಸ್. ಸಂಜನಾ ಹಾಗೂ ಎಚ್.ಎಂ. ಜಯಶ್ರೀ ಅವರು ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊನ್ನಮ್ಮ 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ, ಸಂಜನಾ 600 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

1ಇಪಿ : ಹೊನ್ನಾಳಿ ಪಟ್ಟಣದ ಅಗ್ರಹಾರದಲ್ಲಿರುವ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿ ಎಸ್. ಧೀರಜ್ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ಅವರನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಗೌರವಿಸಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.