ADVERTISEMENT

ಹೆಡ್‌ ಕಾನ್‌ಸ್ಟೆಬಲ್‌ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 2:48 IST
Last Updated 28 ಡಿಸೆಂಬರ್ 2022, 2:48 IST
ಭರತ್
ಭರತ್   

ದಾವಣಗೆರೆ: ಚೆಕ್‌ಬೌನ್ಸ್ ಪ್ರಕರಣದಲ್ಲಿ ತಮಿಳುನಾಡು ಮೂಲದ ಆರೋಪಿಗೆ ವಾರೆಂಟ್ ಜಾರಿ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಹೊನ್ನಾಳಿ ಠಾಣೆಯ ಹೆಡ್ ಕಾನ್‌ಸ್ಟೆಬಲ್‌ ಭರತ್ ಹಾಗೂ ಅವರ ಮಾವ ಸುರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ ಜಿಲ್ಲೆಯ ಗುಡ್ಡದಮಾದಾಪುರ ಗ್ರಾಮದ ಅವಿನಾಶ್ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ₹20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಈ ಪೈಕಿ ₹ 15 ಸಾವಿರವನ್ನು ಭರತ್ ಅವರ ಅಕ್ಕನ ಗಂಡ ಸುರೇಶ್ ಅವರ ಮೂಲಕ ಹೊನ್ನಾಳಿ ಬಸ್ ನಿಲ್ದಾಣದಲ್ಲಿ ಪಡೆಯುತ್ತಿರುವ ವೇಳೆ ಬಂಧಿಸಲಾಗಿದೆ.

ಲೋಕಾಯುಕ್ತ ಎಸ್‌ಪಿ ಎಂ.ಎಸ್‌. ಕೌಲಾಪುರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ರಾಷ್ಟ್ರಪತಿ ಎಚ್‌.ಎಸ್‌. ಪಿಐ ಆಂಜನೇಯ ಎನ್.ಎಚ್‌ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು.

ADVERTISEMENT

ಅಮಾನತು: ‘ಲೋಕಾಯುಕ್ತ ಬಲೆಗೆ ಬಿದ್ದ ಹೊನ್ನಾಳಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಭರತ್ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.