ದಾವಣಗೆರೆ: ದೇಶದ ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂಬ ಭರವಸೆ ಇದೆ ಎಂದು ರೇಣುಕಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡರ್ ತಿಳಿಸಿದರು.
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಜಾಮೀನು ಮಂಜೂರಾಗಿರುವ ಕುರಿತು ಅವರು ಪ್ರತಿಕ್ರಿಯೆ ನೀಡಿದರು. ಹರಿಹರದಲ್ಲಿರುವ ಸೊಸೆಯ ಮನೆಗೆ ಬುಧವಾರ ಭೇಟಿ ನೀಡಿದ್ದ ಶಿವನಗೌಡರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
‘ಪುತ್ರನ ಕೊಲೆ ನಡೆದಾಗಿನಿಂದ ಕುಟುಂಬ ನೋವಿನಲ್ಲಿದೆ. ದರ್ಶನ್‌ಗೆ ಜಾಮೀನು ಮಂಜೂರಾಗಿರುವ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವುದು ಕಷ್ಟ. ದರ್ಶನ್ ಅನಾರೋಗ್ಯಕ್ಕೆ ಸಂಬಂಧಿಸಿದಂತೆ ಕೂಡ ಏನೂ ಹೇಳಲಾಗದು. ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ನಮಗೂ ಸಂಬಂಧವಿಲ್ಲ’ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.