ADVERTISEMENT

ಚನ್ನಗಿರಿ: ಅಂತರ ರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2023, 14:20 IST
Last Updated 25 ನವೆಂಬರ್ 2023, 14:20 IST
ಚನ್ನಗಿರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆ ಅಂಗವಾಗಿ ಶನಿವಾರ ನಡೆದ ಕಾನೂನು ಅರಿವು ಶಿಬಿರ ಕಾರ್ಯಕ್ರಮವನ್ನು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಮ ಶ್ರೀವತ್ಸ ಉದ್ಘಾಟಿಸಿದರು. ಎಂ. ರಾಜಪ್ಪ, ರೂಪ್ಲಿಬಾಯಿ ಇದ್ದರು
ಚನ್ನಗಿರಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆ ಅಂಗವಾಗಿ ಶನಿವಾರ ನಡೆದ ಕಾನೂನು ಅರಿವು ಶಿಬಿರ ಕಾರ್ಯಕ್ರಮವನ್ನು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಮ ಶ್ರೀವತ್ಸ ಉದ್ಘಾಟಿಸಿದರು. ಎಂ. ರಾಜಪ್ಪ, ರೂಪ್ಲಿಬಾಯಿ ಇದ್ದರು   

ಚನ್ನಗಿರಿ: ‘ಮಹಿಳೆಯರು ಪುರುಷರಿಗೆ ಸರಿ ಸಮಾನವಾಗಿ ಎಲ್ಲ ರಂಗಗಳಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆದರೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವುದು ವಿಷಾದನೀಯ’ ಎಂದು ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಮ ಶ್ರೀವತ್ಸ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ದಿನಾಚರಣೆ ಅಂಗವಾಗಿ ಶನಿವಾರ ನಡೆದ ಮಹಿಳೆಯರ ಕಿರುಕುಳ ಕಾಯ್ದೆ ಕಾನೂನು ಅರಿವು ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಹಿಂದಿನ ಕಾಲದಲ್ಲಿ ಕೇವಲ ಅಡುಗೆ ಮನೆಗೆ ಮಾತ್ರ ಸೀಮಿತವಾಗಿದ್ದಳು. ಆದರೆ ಈಗ ಮಹಿಳೆ ಎಲ್ಲ ರಂಗಗಳಲ್ಲಿಯೂ ತನ್ನ ಛಾಪು ಮೂಡಿಸುತ್ತಿದ್ದಾಳೆ. ಯಾವುದೇ ರಂಗದಲ್ಲಿಯೂ ಮಹಿಳೆಯರೇ ಮುಂದೆ ಇರುತ್ತಾರೆ. ಮಹಿಳೆಯರಲ್ಲಿ ಆತ್ಮಸ್ಥೆರ್ಯ ಹೆಚ್ಚಬೇಕು. ಮಹಿಳೆಯರಿಗೆ ಕಾನೂನಿನ ಅರಿವು ತೀರಾ ಅಗತ್ಯ ಎಂದರು.

ADVERTISEMENT

ಬಿಇಒ ಎಲ್. ಜಯಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಸುನೀತಾ, ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲ ಎಂ.ಎಚ್. ಲೋಹಿತಾಶ್ವ, ವಕೀಲರ ಸಂಘದ ಉಪಾಧ್ಯಕ್ಷ ಆರ್. ಬಾಬುಜಾನ್, ಕಾರ್ಯದರ್ಶಿ ಎಂ.ಎಸ್. ಜಗದೀಶ್, ಪಿಎಸ್ಐ ರೂಪ್ಲಿಬಾಯಿ ಉಪಸ್ಥಿತರಿದ್ದರು. ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.