ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಚಿನ್ನೀಕಟ್ಟೆ ಗ್ರಾಮದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ರಾತ್ರಿ 10ಗಂಟೆಯ ಬಳಿಕ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಗ್ರಾಮದಲ್ಲಿ ಶುಕ್ರವಾರ ರಾತ್ರಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಪ್ರಚಾರ ಮಾಡುತ್ತಿರುವ ವೇಳೆ ಫ್ಲೈಯಿಂಗ್ ಸ್ಕ್ವಾಡ್ ತಡೆದು ನಿಲ್ಲಿಸಿದ್ದಾರೆ. ಆ ಬಳಿಕ ವಾಹನದಿಂದ ಇಳಿದು 10.45ರವರೆಗೂ ಕಾಲ್ನಡಿಗೆಯಲ್ಲಿ ಪ್ರಚಾರ ಮಾಡಿದ್ದಾರೆ.
ಹೊನ್ನಾಳಿ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ ಗುರುರಾಜ ಮಠಪತಿ ನ್ಯಾಮತಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.