ADVERTISEMENT

ಸುದೀಪ್‌ ಗೈರು: ಅಭಿಮಾನಿಗಳ ಆಕ್ರೋಶ

ವಾಲ್ಮೀಕಿ ಜಾತ್ರೆ: ಮೂವರು ಪೊಲೀಸರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 21:17 IST
Last Updated 9 ಫೆಬ್ರುವರಿ 2023, 21:17 IST
ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಗೈರು ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಅಭಿಮಾನಿಗಳಿಂದ ಉಂಟಾದ ನೂಕುನೂಗ್ಗಲನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು  –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಗೈರು ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಅಭಿಮಾನಿಗಳಿಂದ ಉಂಟಾದ ನೂಕುನೂಗ್ಗಲನ್ನು ಹತೋಟಿಗೆ ತರಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು  –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ಹರಿಹರ (ದಾವಣಗೆರೆ ಜಿಲ್ಲೆ): ಜಿಲ್ಲೆಯ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಅಂಗವಾಗಿ ಗುರುವಾರ ಸಂಜೆ ನಡೆದ ಸಮಾರಂಭಕ್ಕೆ ನಟ ಕಿಚ್ಚ ಸುದೀಪ್‌ ಗೈರಾಗಿದ್ದರಿಂದ ಬೇಸರಗೊಂಡ ಅಭಿಮಾನಿಗಳು ವೇದಿಕೆ ಮುಂಭಾಗದ ಕುರ್ಚಿಗಳನ್ನು ಮುರಿದು ಆಕ್ರೋಶವ್ಯಕ್ತಪಡಿಸಿದರು.

ವೇದಿಕೆ ಬಳಿ ಅಳವಡಿಸಿದ್ದಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿದ ಅಭಿಮಾನಿಗಳನ್ನು ನಿಯಂತ್ರಿಸಲು ಮುಂದಾದ ಪೊಲೀಸರ ಪೈಕಿ ಮೂವರು ಗಾಯಗೊಂಡರು.

ಕಾರ್ಯಕ್ರಮಕ್ಕೆ ಸುದೀಪ್‌ ಅವರನ್ನು ಆಹ್ವಾನಿಸಿದ್ದರಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಮಹರ್ಷಿ ವಾಲ್ಮೀಕಿ ಪೀಠದ ಸಭಾಂಗಣದೆದುರು ನೆರೆದಿದ್ದರು. ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆದ ವೇದಿಕೆ ಕಾರ್ಯಕ್ರಮದಲ್ಲೂ ಅಭಿಮಾನಿಗಳು ಸುದೀಪ್‌ ಪರ ಜೈಕಾರ ಕೂಗಿ ಕೇಕೆ ಹಾಕಿದ್ದರು. ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗಾಗ ಎಚ್ಚರಿಕೆ ನೀಡಿ ಅಭಿಮಾನಿಗಳನ್ನು ಸುಮ್ಮನಾಗಿಸುತ್ತಿದ್ದರು.

ADVERTISEMENT

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಪೂರ್ಣಗೊಳಿಸಿ ತೆರಳಿದ ನಂತರವೂ ಸುದೀಪ್‌ ಬಾರದ್ದರಿಂದ ತಾಳ್ಮೆ ಕಳೆದುಕೊಂಡ ಅಭಿಮಾನಿಗಳು ಬ್ಯಾರಿಕೇಡ್‌ಗಳು ನೆಲಕ್ಕುರುಳಿಸಿ ವೇದಿಕೆಯತ್ತ ನುಗ್ಗತೊಡಗಿದರು.
ಪ್ಲಾಸ್ಟಿಕ್‌ ಕುರ್ಚಿಗಳನ್ನು ಪುಡಿಗಟ್ಟಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ಬ್ಯಾರಿಕೇಡ್‌ಗಳನ್ನು ಎಸೆದಿದ್ದರಿಂದ ಗಾಯಗೊಂಡ ಮೂವರು ಪೊಲೀಸರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಬೆಂಗಳೂರಿನಲ್ಲಿ ಆಯೋಜಿಸಿರುವ ಏರ್‌ಶೋ ಕಾರಣ ಹೆಲಿಕಾಪ್ಟರ್‌ ಹಾರಾಟಕ್ಕೆ ಅವಕಾಶ ದೊರೆಯದೇ ಸುದೀಪ್‌ ಜಾತ್ರಾ ಸಮಾರಂಭಕ್ಕೆಬರಲು ಸಾಧ್ಯವಾಗಿಲ್ಲ ಎಂದು ಆಯೋಜಕರು ಘೋಷಿಸಿದ್ದರಿಂದ ಅಭಿಮಾನಿಗಳು ನಿರಾಸೆಯಿಂದ ವಾಪಸ್ಸಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.