ADVERTISEMENT

ದಾವಣಗೆರೆ: ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕರ ಮನೆ ಮೇಲೆ ಲೋಕಾಯುಕ್ತ ದಾಳಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2024, 6:08 IST
Last Updated 12 ನವೆಂಬರ್ 2024, 6:08 IST
   

ದಾವಣಗೆರೆ: ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್‌ರಾಜ್ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ₹ 1 ಲಕ್ಷ ನಗದು, ಇನ್ನೋವಾ ಕಾರು ಹಾಗೂ ಆಸ್ತಿಯ ದಾಖಲೆ ಪತ್ತೆಯಾಗಿವೆ.

ಇಲ್ಲಿನ ಶಕ್ತಿನಗರದ ಮೂರನೇ ಕ್ರಾಸ್‌ನಲ್ಲಿರುವ ಮನೆಯ ಮೇಲೆ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇನ್‌ಸ್ಪೆಕ್ಟರ್ ಮಧುಸೂದನ್ ಹಾಗೂ ಪ್ರಭು ಸೇರಿ ಹತ್ತಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಅನುಕಂಪದ ಆಧಾರದ ಮೇರೆಗೆ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್‌ರಾಜ್, ಹಲವು ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಯನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.