ADVERTISEMENT

ಮುಖ್ಯಮಂತ್ರಿಯನ್ನು ಹೆಗಡೆ ಏಕವಚನದಲ್ಲಿ ನಿಂದಿಸಿರುವುದು ಸರಿಯಲ್ಲ: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 16 ಜನವರಿ 2024, 5:00 IST
Last Updated 16 ಜನವರಿ 2024, 5:00 IST
ಎಂ.ಪಿ. ರೇಣುಕಾಚಾರ್ಯ
ಎಂ.ಪಿ. ರೇಣುಕಾಚಾರ್ಯ   

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅನಂತ ಕುಮಾರ್ ಹೆಗಡೆ ಏಕವಚನದಲ್ಲಿ ನಿಂದಿಸಿರುವುದನ್ನು ನಾನು ಒಪ್ಪುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್. ರಾಜಶೇಖರ್ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ‘ಬಿಜೆಪಿಗೆ ಒಂದು ಸಿದ್ದಾಂತ ಇದೆ. ಅದರಂತೆ ನಡೆದುಕೊಳ್ಳಬೇಕು. ಸರ್ಜಿಕಲ್ ಸ್ಟ್ರೈಕ್ ನಡೆದಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಏಕವಚನದಲ್ಲಿ ನಿಂದಿಸಿದ್ದರು. ಯಾರೇ ಆಗಲಿ ಯಾರ ಬಗ್ಗೆಯೂ ಏಕವಚನದಲ್ಲಿ ಮಾತನಾಡಬಾರದು. ಆರೋಗ್ಯಕರ ಟೀಕೆ ಟಿಪ್ಪಣಿ ಇರಬೇಕು’ ಎಂದು ಹೇಳಿದರು.

‘ಸಂ‌ಸದ ಜಿ.ಎಂ. ಸಿದ್ದೇಶ್ವರ ಅವರಿಗೆ ಜೀವ ಬೆದರಿಕೆ ವಿಷಯ ಕುರಿತು ಪ್ರತಿಕ್ರಿಯಿಸಿ, ಇದನ್ನು ಖಂಡಿಸುತ್ತೇನೆ. ಅವರು ಪ್ರಧಾನಮಂತ್ರಿ, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗೆ ದೂರು ನೀಡಲಿ’ ಎಂದರು.

ADVERTISEMENT

‘ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ಕ್ಷೇತ್ರಕ್ಕೆ ತುಂಬಾ ಜನ ಟಿಕೆಟ್ ಆಕಾಂಕ್ಷಿಗಳು ಇದ್ದು, ಹೊರ ಜಿಲ್ಲೆಯವರನ್ನು ಬಿಟ್ಟು ಸ್ಥಳೀಯರಿಗೆ ಅವಕಾಶ ಕೊಡಬೇಕು. ಕುಟುಂಬದವರಿಗೆ ಟಿಕೆಟ್ ಬೇಕು ಅಂತ ಕುಳಿತರೆ ಹೇಗೆ? ಸಾಮಾನ್ಯ ಕಾರ್ಯಕರ್ತ ಜಿಲ್ಲಾ ಘಟಕದ ಅಧ್ಯಕ್ಷರಾದಂತೆ ಸಂಸದರು ಆಗಲಿ ಬಿಡಿ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.