ADVERTISEMENT

ಚನ್ನಗಿರಿ: ಮಾಡಾಳ್ ಮಲ್ಲಿಕಾರ್ಜುನ್ ಶಕ್ತಿ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2023, 9:21 IST
Last Updated 21 ಏಪ್ರಿಲ್ 2023, 9:21 IST
ಚನ್ನಗಿರಿ ಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭಾಗವಹಿಸಿದ್ದರು.
ಚನ್ನಗಿರಿ ಪಟ್ಟಣದಲ್ಲಿ ಸ್ವತಂತ್ರ ಅಭ್ಯರ್ಥಿ ಮಾಡಾಳ್ ಮಲ್ಲಿಕಾರ್ಜುನ್ ನಾಮಪತ್ರ ಸಲ್ಲಿಕೆ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭಾಗವಹಿಸಿದ್ದರು.   

ಚನ್ನಗಿರಿ: ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಡಾಳ್ ಮಲ್ಲಿಕಾರ್ಜುನ್ ಗುರುವಾರ ಸಾವಿರಾರು ಬೆಂಬಲಿಗರೊಂದಿಗೆ ಮೆರವಣಿಗೆ ಮೂಲಕ ಬಂದು ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಪಟ್ಟಣದ ಕೆರೆ ಏರಿ ಚೌಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮೆರವಣಿಗೆಯಲ್ಲಿ ಹೊರಟರು. ನಂತರ ಊರ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಬಂದು ಅಲ್ಲಿ ಪೂಜೆ ಸಲ್ಲಿಸಿ ಕಲ್ಲು ಸಾಗರ ರಸ್ತೆ, ಗಣೇಶ
ವೃತ್ತ, ಮಾರುತಿ ವೃತ್ತದ ಮೂಲಕ ರಾಷ್ಟ್ರೀಯ ಹೆದ್ದಾರಿ 13ಕ್ಕೆ ಸೇರಿಕೊಂಡು ನಂತರ ಹೆದ್ದಾರಿಯಲ್ಲಿ ಸಾಗಿ
ತಾಲ್ಲೂಕು ಕಚೇರಿಗೆ ಬಂದು ಚುನಾವಣಾಧಿಕಾರಿಗೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.

ಲಂಚ ಪ್ರಕರಣದ ಆರೋಪದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೆರವಣಿಗೆಯಲ್ಲಿ ಭಾಗವಹಿಸಿ ನೆರೆದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು.

ADVERTISEMENT

ಸಾವಿರಾರು ಬೆಂಬಲಿಗರು ಟ್ರ್ಯಾಕ್ಟರ್, ಜೀಪು, ಕಾರು, ದ್ವಿಚಕ್ರ ವಾಹನ, ಬಸ್ ಹಾಗೂ ಲಾರಿಗಳಲ್ಲಿ ವಿವಿಧ ಗ್ರಾಮಗಳಿಂದ ಬಂದಿದ್ದರು. ಎಲ್ಲ ಕಾರ್ಯಕರ್ತರು ಬಿಳಿ ಟೋಪಿ ಧರಿಸಿದ್ದು ವಿಶೇಷವಾಗಿತ್ತು.

ತೆರೆದ ವಾಹನದಲ್ಲಿ ತುಮ್ಕೋಸ್ ಅಧ್ಯಕ್ಷ ಆರ್.ಎಂ. ರವಿ, ನಿರ್ದೇಶಕ ಟಿ.ವಿ. ರಾಜು ಪಟೇಲ್, ಜೆಡಿಎಸ್ ಟಿಕೆಟ್ ವಂಚಿತ ಎಂ. ಯೋಗೇಶ್, ಎಚ್.ವಿ. ಮಲ್ಲಿಕಾರ್ಜುನ್, ಶ್ರೀನಿವಾಸ್, ಕೆ.ಆರ್. ಗೋಪಿ, ಪುರಸಭೆ ಸದಸ್ಯ ಪಟ್ಲಿ ನಾಗರಾಜ್, ಪಿ.ಎಸ್. ಸಿದ್ದೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.