ADVERTISEMENT

ದಾವಣಗೆರೆ: ಗಾಂಜಾ ಗಿಡಗಳನ್ನು ಬೆಳೆದಿದ್ದ ಅಪರಾಧಿಗೆ ಎರಡು ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 3:24 IST
Last Updated 26 ಜುಲೈ 2024, 3:24 IST
<div class="paragraphs"><p>ಜೈಲು (ಪ್ರಾಧಿನಿಧಿಕ ಚಿತ್ರ)</p></div>

ಜೈಲು (ಪ್ರಾಧಿನಿಧಿಕ ಚಿತ್ರ)

   

– ಐಸ್ಟಾಕ್ ಚಿತ್ರ

ದಾವಣಗೆರೆ: ಗಾಂಜಾ ಗಿಡಗಳನ್ನು ಬೆಳೆದಿದ್ದ ಅಪರಾಧಿಗೆ ಎರಡು ವರ್ಷ ಜೈಲು ಹಾಗೂ ₹ 20 ಸಾವಿರ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ADVERTISEMENT

ಚನ್ನಗಿರಿ ತಾಲ್ಲೂಕಿನ ಗೆದ್ದಲಹಟ್ಟಿಯ ಮಹೇಶ್‌ (42) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶೆ ರಾಜೇಶ್ವರಿ ಎನ್‌.ಹೆಗ್ಡೆ ಆದೇಶ ನೀಡಿದ್ದಾರೆ.

ಗ್ರಾಮದ ಚೌಡೇಶ್ವರಿ ದೇಗುಲದ ಸಮೀಪದ ಖಾಲಿ ನಿವೇಶನದಲ್ಲಿ ಗಾಂಜಾ ಬೆಳೆದಿದ್ದ ಖಚಿತ ಮಾಹಿತಿಯ ಮೇರೆಗೆ ಸಂತೆಬೆನ್ನೂರು ಠಾಣೆಯ ಎಸ್‌ಐ ಶಿವರುದ್ರಪ್ಪ ಎಸ್‌.ಮೇಟಿ ನೇತೃತ್ವದ ಪೊಲೀಸರ ತಂಡ 2020ರ ಸೆ.14ರಂದು ದಾಳಿ ನಡೆಸಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರಿ ವಕೀಲ ಬಿ.ಮಂಜುನಾಥ್‌ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.