ದಾವಣಗೆರೆ: ದಾವಣಗೆರೆ ಜಿಲ್ಲೆಯ ಅಭಿವೃದ್ಧಿ ಸಲುವಾಗಿ ಚರ್ಚಿಸಲು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ, ದಾವಣಗೆರೆ ನಗರ ಮತ್ತು ಗ್ರಾಮಾಂತರ ಯೋಜನೆಗಳು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮತ್ತು ಸರ್ಕಾರ ಮಟ್ಟದಲ್ಲಿ ಬಾಕಿ ಉಳಿದ ಜಿಲ್ಲೆಯ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಮಹಾನಗರ ಪಾಲಿಕೆ, ಧೂಡಾದ ಬಾಕಿ ಉಳಿದ ಯೋಜನೆಗಳು ಹಾಗೂ ಪೂರಕ ಬಜೆಟ್‌ಗಳಿಗೆ ಅನುಮೋದನೆ ನೀಡುವ ಬಗ್ಗೆ ಸಮಾಲೋಚನೆ ಮಾಡಲಾಯಿತು.
ಸಂಸದ ಜಿ.ಎಂ.ಸಿದ್ದೇಶ್ವರ, ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕ ಎಂ.ಎಸ್.ಅರ್ಚನಾ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎನ್. ಶಶಿಕುಮಾರ್, ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಎಂಜಿನಿಯರ್ ಸತ್ಯನಾರಾಯಣ, ಧೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.