ADVERTISEMENT

ಬಾಕಿ ಹಣ ನೀಡದಿದ್ದರೆ ನ್ಯಾಯಾಲಯದ ಮೊರೆ: ಸುರ್ಜೇವಾಲಾ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 15:49 IST
Last Updated 27 ಏಪ್ರಿಲ್ 2024, 15:49 IST
ರಣದೀಪ್ ಸಿಂಗ್ ಸುರ್ಜೇವಾಲಾ
ರಣದೀಪ್ ಸಿಂಗ್ ಸುರ್ಜೇವಾಲಾ   

ದಾವಣಗೆರೆ: ‘ನಾವು ₹18,172 ಕೋಟಿ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿದ್ದೆವು. ಆದರೆ ಕೇಂದ್ರ ₹3,454 ಕೋಟಿ ನೀಡಿದೆ. ಇದು ಯಾವುದಕ್ಕೂ ಸಾಲದು. ಉಳಿದುದ್ದನ್ನು ಶೀಘ್ರವೇ ಬಿಡುಗಡೆ ಮಾಡದಿದ್ದರೆ ಸೋಮವಾರ ಕೋರ್ಟ್ ಮೊರೆ ಹೋಗುತ್ತೇವೆ’ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದರು. 

‘ಪರಿಹಾರ ಬಿಡುಗಡೆ ಮಾಡದಿದ್ದರೆ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ, ರಾಜ್ಯದ ಜನರ ಬಳಿ ಮತ ಕೇಳುವ ನೈತಿಕ ಹಕ್ಕು ಕಳೆದುಕೊಳ್ಳಲಿದ್ದಾರೆ. ಮೋದಿ ಅವರು ಭಾನುವಾರ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಗೋ ಬ್ಯಾಕ್‌ ಚಳವಳಿ ನಡೆಸಲಿದ್ದಾರೆ’ ಎಂದು ಶನಿವಾರ ತಿಳಿಸಿದರು.  

‘ಪರಿಹಾರ ಬಿಡುಗಡೆ ವಿಚಾರದಲ್ಲಿ ದ್ವೇಷದ ನೀತಿ ಅನುಸರಿಸುತ್ತಿರುವ ಪ್ರಧಾನಿ ಮೋದಿ, ರಾಜ್ಯದ ವಿರುದ್ಧ ಹಗೆತನ ಸಾಧಿಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯ ಸೋಲಿಗೆ ಈ ರೀತಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ’ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.