ADVERTISEMENT

ಮೊಕದ್ದಮೆ ವಾಪಸ್‌ ಖಂಡನೀಯ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ 

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2024, 16:31 IST
Last Updated 14 ಅಕ್ಟೋಬರ್ 2024, 16:31 IST
ಹೊನ್ನಾಳಿ ತಾಲ್ಲೂಕಿನ ನರಸಗೊಂಡನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು
ಹೊನ್ನಾಳಿ ತಾಲ್ಲೂಕಿನ ನರಸಗೊಂಡನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು    

ಹೊನ್ನಾಳಿ: ‘ಹುಬ್ಬಳ್ಳಿ ನಗರದಲ್ಲಿ ಪೊಲೀಸ್‍ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ, ಮಾರಕಾಸ್ತ್ರಗಳಿಂದ ದೌರ್ಜನ್ಯ ನಡೆಸಿದ ಗೂಂಡಾಗಳ ವಿರುದ್ಧ ದಾಖಲಾಗಿದ್ದ ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವುದು ಖಂಡನೀಯ’ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕಿನ ನರಸಗೊಂಡನಹಳ್ಳಿ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸದಸ್ಯತ್ವ ಅಭಿಯಾನದಲ್ಲಿ ಅವರು ಮಾತನಾಡಿದರು.

‘ಮೊಕದ್ದಮೆ ವಾಪಸ್‌ ಪಡೆಯುವ ಮೂಲಕ ಅಲ್ಪಸಂಖ್ಯಾತ ಗೂಂಡಾಗಳು ಮತ್ತಷ್ಟ ಗಲಾಟೆ ಮಾಡಲು ಅವಕಾಶ ಮಾಡಿಕೊಟ್ಟಂತ್ತಾಗುತ್ತದೆ. ದೇಶದ್ರೋಹಿಗಳ ವಿರುದ್ದ ಮೊಕದ್ದಮೆಗಳನ್ನು ವಾಪಸ್ ಪಡೆದರೆ ಹಳ್ಳಿಗಳಿಗೆ ತೆರಳಿ ಜನಾಂದೋಲನ ನಡೆಸಲಾಗುವುದು’ ಎಂದು ಅವರು ಎಚ್ಚರಿಸಿದರು.

ADVERTISEMENT

ಗಣೇಶ ವಿಸರ್ಜನೆ ವೇಳೆಯಲ್ಲಿ ಹಿಂದೂ ಯುವಕರ ಮೇಲೆ ಹಾಕಿರುವ ಎಲ್ಲಾ ಮೊಕದ್ದಮೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡ ನಾಗರಾಜ್ ಅರಕೆರೆ ಹಾಗೂ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.