ದಾವಣಗೆರೆ: ಪೋಕ್ಸೊ ಪ್ರಕರಣದಲ್ಲಿ 14 ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರು ಜೈಲಿನಿಂದ ಬಿಡುಗಡೆಯಾಗಿ ಚಿತ್ರದುರ್ಗದಿಂದ ದಾವಣಗೆರೆಗೆ ಬಂದರು.
ದಾವಣಗೆರೆಯ ಶಿವಯೋಗಿ ಮಂದಿರದಲ್ಲಿ ಜಯದೇವ ಮುರುಘರಾಜೇಂದ್ರ ಸ್ವಾಮಿ ಹಾಗೂ ಅಥಣಿ ಮುರುಘೇಂದ್ರ ಶಿವಯೋಗಿಗಳ ಗದ್ದುಗೆಗೆ ಭೇಟಿ ನೀಡಿ ನಮಿಸಿದರು.
ಬಳಿಕ ಸುದ್ದಿಗಾರರೊಂದಿ ಮಾತನಾಡಿ, ವಿಚಾರಣೆ ನ್ಯಾಯಾಲಯದಲ್ಲಿ ಇರುವುದರಿಂದ ನಾನು ಏನು ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನು ಮುಂದೆ ಒಳ್ಳೆಯದು ಮಾಡೋಣ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು ಎಂದು ಮೌನಕ್ಕೆ ಜಾರಿದರು.
ಬಳಿಕ ದೊಡ್ಡಪೇಟೆಯಲ್ಲಿರುವ ವಿರಕ್ತ ಮಠಕ್ಕೆ ಭೇಟಿ ನೀಡಿದರು.
ದಾವಣಗೆರೆ ಭೇಟಿ ಹಿನ್ನೆಲೆಯಲ್ಲಿ ಶಿವಯೋಗಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸಲಾಗಿತ್ತು.
ಮಠಕ್ಕೆ ಬರುತ್ತಿದ್ದಂತೆಯೇ ಭಕ್ತರು ಮುರುಘಾ ಶರಣರಿಗೆ ಜೈಕಾರ ಹಾಕಿದರು.
2022ರ ಜುಲೈ ತಿಂಗಳಲ್ಲಿ ದಾವಣಗೆರೆಯಲ್ಲಿ ನಡೆದ ಜಯದೇವ ಶ್ರೀಗಳ ಸ್ಮರಣೆ ಕಾರ್ಯಕ್ರಮದಲ್ಲಿ ಮುರುಘಾಶರಣರು ಭಾಗವಹಿಸಿದ್ದರು. ಇದೇ ಅವರ ಕಡೆಯ ಕಾರ್ಯಕ್ರಮವಾಗಿತ್ತು.
ಮುರುಘಾಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್ ಇನ್ನಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.