ADVERTISEMENT

ತಾಲ್ಲೂಕಿನ ಅಭಿವೃದ್ಧಿಯಲ್ಲಿ ದಿನಪತ್ರಿಕೆಗಳ ಪಾತ್ರ ಅಪಾರ

ಕನ್ನಡ ನಾಡು ಹಿತ ರಕ್ಷಣಾ ಸಮಿತಿಯಿಂದ ಪತ್ರಿಕಾ, ಆರೋಗ್ಯ ದಿನಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 15:53 IST
Last Updated 3 ಜುಲೈ 2024, 15:53 IST
ಚನ್ನಗಿರಿಯ ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾ ಹಾಗೂ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ಮಾತನಾಡಿದರು
ಚನ್ನಗಿರಿಯ ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾ ಹಾಗೂ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ಮಾತನಾಡಿದರು   

ಚನ್ನಗಿರಿ: ‘ತಾಲ್ಲೂಕಿನ ಸಮಸ್ಯೆಗಳ ಬಗ್ಗೆ ಸುದ್ದಿ, ವಿಶೇಷ ವರದಿಗಳ ಮೂಲಕ ಬೆಳಕು ಚೆಲ್ಲುವ ದಿನಪತ್ರಿಕೆಗಳು ತಾಲ್ಲೂಕಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿವೆ’ ಎಂದು ಕನ್ನಡ ನಾಡು ಹಿತ ರಕ್ಷಣಾ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪತ್ರಿಕಾ ಹಾಗೂ ಆರೋಗ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದಿನಪತ್ರಿಕೆಗಳು ಇಲ್ಲದೇ ಹೋಗಿದ್ದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿರಲಿಲ್ಲ. ಆಡಳಿತ ಯಂತ್ರವನ್ನು ಕ್ರಿಯಾಶೀಲವಾಗಿ ಇಡುವಲ್ಲಿ ಪತ್ರಿಕೆಗಳ ಪಾತ್ರ ಮಹತ್ತರವಾದುದು ಎಂದು ಅವರು ಹೇಳಿದರು.

ADVERTISEMENT

ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು, ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು. ಮನುಷ್ಯ ಆರೋಗ್ಯವಂತನಾಗಿದ್ದರೆ ಎಂತಹ ಕಠಿಣ ಕಾರ್ಯವನ್ನಾದರೂ ಮಾಡಲು ಸಾಧ್ಯವಾಗುತ್ತದೆ. ಕನ್ನಡ ನಾಡು ಹಿತ ರಕ್ಷಣಾ ಸಮಿತಿ ಕೇವಲ ಕನ್ನಡ ನೆಲ, ಜಲ, ಭಾಷೆಯ ಬಗ್ಗೆ ಹೋರಾಟ ನಡೆಸುತ್ತಿಲ್ಲ. ಸಮಾಜಮುಖಿಯಾಗಿಯೂ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಎಂ. ಅಣ್ಣೋಜಿರಾವ್ ಪವಾರ್, ಗೌರವಾಧ್ಯಕ್ಷ ಸರ್ದಾರ್ ಅಹಮ್ಮದ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇನಾಯತ್, ಮಹಿಳಾ ಘಟಕದ ಅಧ್ಯಕ್ಷೆ ಕೆ. ಲಕ್ಷ್ಮೀ, ಗೌರವಾಧ್ಯಕ್ಷೆ ಸುಧಾ, ನಗರ ಘಟಕದ ಅಧ್ಯಕ್ಷೆ ಶಶಿಕಲಾ ನಾಗರಾಜ್, ಸಲಹಾ ಸಮಿತಿ ಅಧ್ಯಕ್ಷೆ ಲತಾ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.