ADVERTISEMENT

ಸಾಲಕ್ಕೆ ಅಂಜಿ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2024, 15:52 IST
Last Updated 3 ಜುಲೈ 2024, 15:52 IST
ಎಂ.ದೇವೇಂದ್ರಪ್ಪ
ಎಂ.ದೇವೇಂದ್ರಪ್ಪ   

ಚೀಲೂರು (ನ್ಯಾಮತಿ): ಕುಟುಂಬದ ನಿರ್ವಹಣೆ ಮತ್ತು ಜಮೀನು ಅಭಿವೃದ್ಧಿಗಾಗಿ ಮಾಡಿದ ಸಾಲದ ಹೊರೆಯಿಂದಾಗಿ ಗ್ರಾಮದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದ ಎಂ.ದೇವೇಂದ್ರಪ್ಪ(73) ಆತ್ಯಹತ್ಯೆ ಮಾಡಿಕೊಂಡವರು. ಮಂಗಳವಾರ ತಡರಾತ್ರಿ ವಿಷ ಸೇವಿಸಿದ್ದು, ತಕ್ಷಣ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರ ಹೆಸರಿನಲ್ಲಿ 7.28 ಎಕರೆ ಜಮೀನು ಇದ್ದು, ಕೆನರಾ ಬ್ಯಾಂಕ್‌ನಲ್ಲಿ ₹ 11 ಲಕ್ಷ, ಕೃಷಿ ಪತ್ತಿನ ಸಂಘದಲ್ಲಿ ₹ 1.50 ಲಕ್ಷ, ಕೈಗಡವಾಗಿ ₹ 10 ಲಕ್ಷ ಸಾಲ ಮಾಡಿದ್ದರು. ಮಳೆ ಕೈಕೊಟ್ಟಿದ್ದರಿಂದ ಫಸಲು ಬಂದಿರಲಿಲ್ಲ. ಸಾಲ ತೀರಿಸುವ ಬಗ್ಗೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪುತ್ರ ನ್ಯಾಮತಿ ಪೊಲೀಸರಿಗೆ ದೂರು ನೀಡಿದ್ದಾರೆ.

ADVERTISEMENT

ಅವರಿಗೆ ಪತ್ನಿ, ಐವರು ಪುತ್ರಿಯರು, ಇಬ್ಬರು ಪುತ್ರರು ಇದ್ದಾರೆ. ನ್ಯಾಮತಿ ಠಾಣೆ ಇನ್‌ಸ್ಪೆಕ್ಟರ್ ಎನ್.ಎಸ್.ರವಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.