ADVERTISEMENT

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ರೆ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 26 ಜುಲೈ 2024, 3:12 IST
Last Updated 26 ಜುಲೈ 2024, 3:12 IST
<div class="paragraphs"><p>ಜೈಲು ಶಿಕ್ಷೆ(ಪ್ರಾತಿನಿಧಿಕ ಚಿತ್ರ)</p></div>

ಜೈಲು ಶಿಕ್ಷೆ(ಪ್ರಾತಿನಿಧಿಕ ಚಿತ್ರ)

   

ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 10 ವರ್ಷ ಜೈಲು ಹಾಗೂ ₹ 50 ಸಾವಿರ ದಂಡ ವಿಧಿಸಿ ಪೋಕ್ಸೊ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಚನ್ನಗಿರಿ ತಾಲ್ಲೂಕಿನ ಅಣ್ಣಾಪುರ ಗ್ರಾಮದ ಸಚಿನ್‌ (24) ಶಿಕ್ಷೆಗೆ ಗುರಿಯಾದ ಅಪರಾಧಿ. ಪ್ರಕರಣದ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ಶ್ರೀರಾಮ್ ನಾರಾಯಣ ಹೆಗ್ಡೆ ಆದೇಶ ನೀಡಿದ್ದಾರೆ.

ADVERTISEMENT

ವೃತ್ತಿಯಲ್ಲಿ ಆಟೊ ಚಾಲಕನಾಗಿದ್ದ ಸಚಿನ್‌, 2021 ಸೆ.11ರಂದು ಬಾಲಕಿಯನ್ನು ಅಪಹರಿಸಿದ್ದನು. ಚಿಕ್ಕಮಗಳೂರು ಜಿಲ್ಲೆಗೆ ಕರೆದೊಯ್ದು ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದನು. ಈ ಸಂಬಂಧ ಚನ್ನಗಿರಿ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತೆಯ ಪರವಾಗಿ ಸರ್ಕಾರಿ ವಕೀಲೆ ಸುನಂದ ಮಡಿವಾಳರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.