ADVERTISEMENT

ಸ್ನಾತಕೋತ್ತರ, ಬಿ.ಇಡಿ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 4:46 IST
Last Updated 19 ಏಪ್ರಿಲ್ 2021, 4:46 IST

ದಾವಣಗೆರೆ: ಕೋವಿಡ್ ಕಾರಣದಿಂದಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕುಲಪತಿಗಳ ನಿರ್ದೇಶನದ ಮೇರೆಗೆ ದಾವಣಗೆರೆ ವಿಶ್ವವಿದ್ಯಾಲಯದ ಸ್ನಾತಕೋತ್ತರ ಹಾಗೂ ಬಿ.ಇಡಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

‘ಸ್ನಾತಕೋತ್ತರ ಪದವಿಯ ಮೊದಲ ಹಾಗೂ ಮೂರನೇ ಸೆಮಿಸ್ಟರ್ ಹಾಗೂ ಬಿ.ಇಡಿಯ ಎರಡು ಮತ್ತು 4ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ಆದೇಶ ಬಂದ ಮೇಲೆ ವೇಳಾಪಟ್ಟಿಯನ್ನು ಸಿದ್ಧಪಡಿಸಿ ತಿಳಿಸಲಾಗುವುದು’ ಎಂದು ದಾವಣಗೆರೆ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಪ್ರೊ. ಅನಿತಾ ಎಚ್‌.ಎಸ್. ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT