ದಾವಣಗೆರೆ: ‘ಪ್ರಜಾವಾಣಿ’ ಪತ್ರಿಕೆಗೆ 75 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು, ಮಂಗಳವಾರ ಪತ್ರಿಕಾ ಪ್ರತಿನಿಧಿಗಳ ಜತೆಗೆ ಅಮೃತ ಮಹೋತ್ಸವ ಆಚರಿಸಲಾಯಿತು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಜಿ.ಡಿ. ರಾಘವನ್ ಅವರು, ಅಮೃತ ಮಹೋತ್ಸವದ ಪೋಸ್ಟರ್ ಬಿಡುಗಡೆ ಮಾಡಿ, ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
‘ಪ್ರಜಾವಾಣಿ’ ಬ್ಯೂರೊ ಮುಖ್ಯಸ್ಥ ಸಿದ್ದಯ್ಯ ಹಿರೇಮಠ್, ಪ್ರಸರಣ ವಿಭಾಗದ ವ್ಯವಸ್ಥಾಪಕ ಪ್ರಕಾಶ್ ನಾಯಕ್, ಜಾಹೀರಾತು ವಿಭಾಗದ ಹಿರಿಯ ವ್ಯವಸ್ಥಾಪಕ ಪ್ರಮೋದ್ ಭಾಗವತ್, ಮುದ್ರಣ ವಿಭಾಗದ ವ್ಯವಸ್ಥಾಪಕ ಟಿ. ಮುರಳೀಧರ, ಪ್ರಸರಣ ವಿಭಾಗದ ಪ್ರತಿನಿಧಿಗಳಾದ ಭರತ್ ಬಿಡ್ಡಪ್ಪ, ಸತೀಶ್, ಅಕೌಂಟೆಂಟ್ ವಿಭಾಗದ ಪಾಂಡುರಂಗ ಶೆಟ್ಟಿ, ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚಂದ್ರಶೇಖರ್, ಅರುಣ್ ಕುಮಾರ್, ರಮೇಶ್ ಜೆ. ವತನ್, ನಿಂಗಪ್ಪ, ಆನಂದ, ಪ್ರದೀಪ್, ಪ್ರಕಾಶ್, ಬಸವರಾಜ ಮುಂತಾದವರು
ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.