ADVERTISEMENT

ದಾವಣಗೆರೆ | ಗೌರವ ಧನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2023, 6:09 IST
Last Updated 1 ಆಗಸ್ಟ್ 2023, 6:09 IST
 ಬಾಕಿ ಇರುವ ಎರಡು ತಿಂಗಳ ಗೌರವಧನ ಬಿಡುಗಡೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ವತಿಯಿಂದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. –ಪ್ರಜಾವಾಣಿ ಚಿತ್ರ
 ಬಾಕಿ ಇರುವ ಎರಡು ತಿಂಗಳ ಗೌರವಧನ ಬಿಡುಗಡೆಗೆ ಆಗ್ರಹಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ವತಿಯಿಂದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. –ಪ್ರಜಾವಾಣಿ ಚಿತ್ರ   

ದಾವಣಗೆರೆ: ಬಿಸಿಯೂಟ ತಯಾರಕರಿಗೆ ಜೂನ್ ಹಾಗೂ ಜುಲೈ ತಿಂಗಳ ಗೌರವಧನ ಬಿಡುಗಡೆ ಮಾಡಬೇಕು ಎಂದು  ಒತ್ತಾಯಿಸಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ವತಿಯಿಂದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

‘ತಾಲ್ಲೂಕಿನ ಎಲ್ಲಾ ಶಾಲೆಗಳಲ್ಲಿ ಅಡುಗೆಯವರಾಗಿ ಕೆಲಸ ಮಾಡುತ್ತಿರುವ ಬಿಸಿಯೂಟ ತಯಾರಕರಿಗೆ 2023ರ ಜೂನ್  ಹಾಗೂ ಜುಲೈ ತಿಂಗಳು ಗೌರವ ಧನ ಪಾವತಿಯಾಗಿಲ್ಲ. ಇದರಿಂದ ಜೀವನ ನಡೆಸುವುದು ಕಷ್ಟವಾಗಿದೆ. ಎರಡು ತಿಂಗಳ ಗೌರವಧನ ಬಿಡುಗಡೆ ಮಾಡಬೇಕು’ ಎಂದು ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಆವರಗೆರೆ ಚಂದ್ರು ಆಗ್ರಹಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಹಾಗೂ ಉಪಹಾರ ಯೋಜನೆ ತಾಲ್ಲೂಕು ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ADVERTISEMENT

ಪ್ರತಿಭಟನೆಯಲ್ಲಿ ಮಳಲ್ಕೆರೆ ಜಯಮ್ಮ, ಜ್ಯೋತಿಲಕ್ಷ್ಮೀ, ಪದ್ಮಾ, ಸರೋಜ, ಗೀತಾ, ಲತಾ, ಮಂಜುಳಾ ಹಾಗೂ ಬಿಸಿಯೂಟ ತಯಾರಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.