ADVERTISEMENT

ಧರ್ಮಾಚರಣೆ ಮರೆತರೆ ಅಪಾಯ: ರಂಭಾಪುರಿ ಶ್ರೀ

​ಪ್ರಜಾವಾಣಿ ವಾರ್ತೆ
Published 11 ಜುಲೈ 2024, 15:29 IST
Last Updated 11 ಜುಲೈ 2024, 15:29 IST
ಹರಿಹರದ ಹಳೇಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶ್ರೀ ಗುರುವಾರ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು
ಹರಿಹರದ ಹಳೇಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಶ್ರೀ ಗುರುವಾರ ಇಷ್ಟಲಿಂಗ ಮಹಾಪೂಜೆ ನೆರವೇರಿಸಿದರು   

ಹರಿಹರ: ಮಾನವನ ಬದುಕಿನ ಉನ್ನತಿ ಮತ್ತು ಶ್ರೇಯಸ್ಸಿಗೆ ಧರ್ಮವೇ ಮೂಲ. ಎಲ್ಲರೂ ಧರ್ಮಪಾಲನೆ ಮಾಡಬೇಕಿದ್ದು, ನಿರ್ಲಕ್ಷ್ಯ ತೋರಿದರೆ ಅಪಾಯ ತಪ್ಪಿದ್ದಲ್ಲ ಎಂದು ರಂಭಾಪುರಿ ಶ್ರೀ ಅಭಿಪ್ರಾಯಪಟ್ಟರು.

ನಗರದ ಹಳೇಪೇಟೆ ಬಸವೇಶ್ವರ ದೇವಸ್ಥಾನದ ರೇಣುಕಾಚಾರ್ಯ ಸಭಾಭವನದಲ್ಲಿ ಗುರುವಾರ ನಡೆದ ಇಷ್ಟಲಿಂಗ ಮಹಾಪೂಜಾ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಅಂತರಂಗ ಮತ್ತು ಬಹಿರಂಗ ಶುದ್ಧಗೊಳಿಸಿಕೊಳ್ಳಲು ವೀರಶೈವ ಧರ್ಮ ಒತ್ತಿ ಹೇಳುತ್ತದೆ. ಜೀವನ ವಿಕಾಸಕ್ಕಾಗಿ ಧಾರ್ಮಿಕ ಮೌಲ್ಯಗಳ ಪರಿಪಾಲನೆ ಮಾಡುವ ಅವಶ್ಯಕತೆಯಿದೆ. ಶಿವನನ್ನು ಪೂಜಿಸಿದರೆ ಸಕಲ ದೇವಾನುದೇವತೆಗಳನ್ನು ಪೂಜಿಸಿದ ಫಲ ದೊರಕುತ್ತದೆ. ಆಸಕ್ತರು ಗುರುವಿನ ಮೂಲಕ ಇಷ್ಟಲಿಂಗವನ್ನು ಪಡೆದು ಮೋಕ್ಷದಾಯಕವಾದ ಶಿವ ಪಂಚಾಕ್ಷರಿ ಮಂತ್ರವನ್ನು ಜಪಿಸಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಕಾರ್ಯಕ್ರಮದಲ್ಲಿ ಮಣಕೂರು ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಧರ್ಮ ಸಂಸ್ಕೃತಿಯ ಬಗ್ಗೆ ಬೋಧಿಸಿದರು.

ಲಕ್ಷ್ಮೇಶ್ವರದ ಕರೆವಾಡಿ ಮಠದ ಮಳೆಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿದ್ದರು.

ಇಷ್ಟಲಿಂಗ ಮಹಾಪೂಜೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.