ಮಲೇಬೆನ್ನೂರು: ನನೆಗುದಿಗೆ ಬಿದ್ದಿರುವ ಮಲೇಬೆನ್ನೂರು-ಜಿಗಳಿ-ಹೊಳೆಸಿರಿಗೆರೆ ರಸ್ತೆ ನಿರ್ಮಾಣ ಕಾಮಗಾರಿಯಿಂದಾಗಿ ಹಲವು ಸಮಸ್ಯೆಗಳು ಸೃಷ್ಟಿಯಾಗಿವೆ ಎಂದು ನಾಗರಿಕರು ದೂರಿದ್ದಾರೆ.
ಮಳೆಗಾಲದಲ್ಲಿ ರಸ್ತೆ ಕೆಸರಿನ ಗದ್ದೆಯಂತಾಗುವುದರಿಂದ ಅಪಘಾತಗಳು ಸಂಭವಿಸುವುದು ಸಾಮಾನ್ಯವಾಗಿದೆ. ಹತ್ತಾರು ನಾಗರಿಕರು ಕೈ ಕಾಲು ಮುರಿದುಕೊಂಡಿದ್ದಾರೆ. ಆಜಾದ್ ಬಡಾವಣೆ, ಆಸ್ಪತ್ರೆ, ಸರ್ಕಾರಿ ಪ್ರೌಢಶಾಲೆ, ಕಿರಿಯ ಮಹಾವಿದ್ಯಾಲಯ, ಕೈಗಾರಿಕಾ ತರಬೇತಿ ಸಂಸ್ಥೆಗೆ ಹೋಗುವ ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಹಾಗೂ ರೈತರ ಹೊಲಗಳಿಗೂ ಹೋಗುವುದು ದುಸ್ತರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ದೇವದುರ್ಗದ ಗುತ್ತಿಗೆದಾರ ವಿರೂಪಾಕ್ಷಪ್ಪ ಬಳೆ ಎಂಬುವವರು ₹ 4.75 ಕೋಟಿ ವೆಚ್ಚದ ಕಾಮಗಾರಿ ಗುತ್ತಿಗೆ ಪಡೆದಿದ್ದಾರೆ. 6 ತಿಂಗಳಲ್ಲಿ ಕಾಮಗಾರಿ ಮುಗಿಸಿಕೊಡುವುದಾಗಿ ತಿಳಿಸಿ ಅರೆಬರೆ ಕೆಲಸ ಮಾಡಿ, ಇದೀಗ ನಾಪತ್ತೆಯಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು, ಎಂಜಿನಿಯರ್‌ಗಳು ಗಮನ ಹರಿಸಿ ರಸ್ತೆ ಸಮಸ್ಯೆ ಪರಿಹರಿಸಬೇಕು ಎಂದು ಮಕ್ಕಳ ತಜ್ಞ ಡಾ.ಶ್ರೀನಿವಾಸ್ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.