ADVERTISEMENT

ದಾವಣಗೆರೆ: ಅರೆಬೆಂದ ಅನ್ನ ತಿಂದು 16 ವಿದ್ಯಾರ್ಥಿನಿಯರು ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2023, 7:13 IST
Last Updated 6 ಸೆಪ್ಟೆಂಬರ್ 2023, 7:13 IST
<div class="paragraphs"><p>ಅರೆಬೆಂದ ಅನ್ನ ತಿಂದು ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ಮಾಯಕೊಂಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು</p></div>

ಅರೆಬೆಂದ ಅನ್ನ ತಿಂದು ಅಸ್ವಸ್ಥಗೊಂಡ ವಿದ್ಯಾರ್ಥಿನಿಯರಿಗೆ ಮಾಯಕೊಂಡದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಯಿತು

   

ಪ್ರಜಾವಾಣಿ ಚಿತ್ರ

ದಾವಣಗೆರೆ: ತಾಲ್ಲೂಕಿನ ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯದಲ್ಲಿ ಅರೆಬೆಂದ ಅನ್ನ ತಿಂದು 22 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ.

ADVERTISEMENT

ಮಂಗಳವಾರ ರಾತ್ರಿ ಅನ್ನ ಸಾಂಬಾರು ತಿಂದ ಬಳಿಕ ಆರು ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಾಯಕೊಂಡದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸುಸ್ತು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಬೆಳಿಗ್ಗೆ ಪುಳಿಯೊಗರೆ ತಿಂದು 16 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಅವರೆಲ್ಲಾ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಷಣ್ಮುಖಪ್ಪ, ಎಡಿಸಿ ಲೋಕೇಶ್, ತಹಶೀಲ್ದಾರ್ ಎಂ.ಬಿ. ಅಶ್ವತ್ಥ್, ಉಪವಿಭಾಗಾಧಿಕಶರಿ ದುರ್ಗಾಶ್ರೀ, ಸಮಾಜಕಲ್ಯಾಣ ಇಲಾಖೆ ಡಿಡಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ಪರಿಶೀಲನೆ ನಡೆಸಿ ಹಾಸ್ಟೆಲ್ ಸಿಬ್ಬಂದಿ ವಿರುದ್ಧ ಕ್ರಮ‌ಕೈಗೊಳ್ಳುವಂತೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.