ಹೊಸದುರ್ಗ: ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು ದೆಹಲಿಯ ಕರ್ನಾಟಕ ಸಂಘ ಪ್ರಸಕ್ತ ಸಾಲಿನ ‘ರಾಷ್ಟ್ರೀಯ ಕನ್ನಡ ಭಾರತಿ ರಂಗ ಪ್ರಶಸ್ತಿ’ಗೆ ಆಯ್ಕೆ ಮಾಡಿದೆ.
ರಂಗಭೂಮಿಗೆ ಸ್ವಾಮೀಜಿ ಅವರು ನೀಡಿದ ಕೊಡುಗೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 50 ಸಾವಿರ ನಗದು, ಪ್ರಶಸ್ತಿ ಫಲಕ, ಸ್ಮರಣಿಕೆಗಳನ್ನು ಒಳಗೊಂಡಿದೆ. ಫೆ.26ರಂದು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಸ್ವಾಮೀಜಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ದೆಹಲಿಯ ಕರ್ನಾಟಕ ಸಂಘ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.