ದಾವಣಗೆರೆ: ಜಿಲ್ಲೆಯು 2019ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 85.95 ಫಲಿತಾಂಶದೊಂದಿಗೆ ರಾಜ್ಯಕ್ಕೆ 9ನೇ ಸ್ಥಾನ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.
ಕಳೆದ ಸಾಲಿನಲ್ಲಿ ಜಿಲ್ಲೆಯು ಶೇ 81.56 ಫಲಿತಾಂಶಗಳೊಂದಿಗೆ ರಾಜ್ಯಕ್ಕೆ 15ನೇ ಸ್ಥಾನ ಪಡೆದಿತ್ತು. ಈ ಬಾರಿ ಶೇ 4.39ರಷ್ಟು ಫಲಿತಾಂಶದಲ್ಲಿ ಏರಿಕೆಯಾಗಿದ್ದು, ಆರು ಸ್ಥಾನಗಳನ್ನು ಬಡ್ತಿ ಹೊಂದಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್. ಪರಮೇಶ್ವರ ನೇತೃತ್ವದಲ್ಲಿ ಅಧಿಕಾರಿಗಳು ಶೈಕ್ಷಣಿಕ ವರ್ಷದ ಆರಂಭದಿಂದಲೇ ‘ವಿಷನ್ ಟಾಪ್–10’ ಗುರಿಯೊಂದಿಗೆ ಹಲವು ಯೋಜನೆಗಳನ್ನು ಕೈಗೊಂಡಿದ್ದು ಸಾಕಾರಗೊಂಡಿದೆ. ಜಿಲ್ಲೆಯು ರಾಜ್ಯಕ್ಕೆ ಹತ್ತು ಸ್ಥಾನದೊಳಗೆ ಬಂದಿರುವುದು ಅಧಿಕಾರಿಗಳಿಗೂ ಖುಷಿ ತಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.