ADVERTISEMENT

ಸಾಸ್ವೆಹಳ್ಳಿ | ಬಸ್‌ ಸೌಲಭ್ಯಕ್ಕೆ ಆಗ್ರಹ: ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2024, 15:45 IST
Last Updated 25 ನವೆಂಬರ್ 2024, 15:45 IST
ಸಾಸ್ವೆಹಳ್ಳಿ ಸಮೀಪದ ರಾಂಪುರದಲ್ಲಿ ಸೋಮವಾರ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು
ಸಾಸ್ವೆಹಳ್ಳಿ ಸಮೀಪದ ರಾಂಪುರದಲ್ಲಿ ಸೋಮವಾರ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು   

ಸಾಸ್ವೆಹಳ್ಳಿ: ಸಮೀಪದ ರಾಂಪುರ ಮಾರ್ಗದಲ್ಲಿ ಹೆಚ್ಚುವರಿ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಸೋಮವಾರ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಹೊನ್ನಾಳಿ ತಾಲ್ಲೂಕಿನ ಬೈರನಹಳ್ಳಿಯಿಂದ ಬೆಳಿಗ್ಗೆ ಬರುವ ಕೆಎಸ್‌ಆರ್‌ಟಿಸಿ ಬಸ್‌ ಸಾಸ್ವೆಹಳ್ಳಿ ಬಸ್ ನಿಲ್ದಾಣದಲ್ಲಿಯೇ ತುಂಬಿರುತ್ತದೆ. ರಾಂ‍‍ಪುರಕ್ಕೆ ಬರುವಷ್ಟರಲ್ಲಿ ಬಸ್‌ನಲ್ಲಿ ಕಾಲಿಡಲು ಜಾಗ ಇರುವುದಿಲ್ಲ. ಇದರಿಂದ ಪ್ರತಿದಿನ ಬಸ್‌ನ ಬಾಗಿಲು ಬಳಿ ಜೋತಾಡುತ್ತಾ ಹೋಗುವುದು ಸಾಮಾನ್ಯವಾಗಿದೆ ಎಂದು ವಿದ್ಯಾರ್ಥಿಗಳು ದೂರಿದರು.

ಈಚೆಗೆ ಬಸ್‌ನಲ್ಲಿ ನಿಲ್ಲಲು ಜಾಗವಿಲ್ಲದೆ ವಿದ್ಯಾರ್ಥಿಯೊಬ್ಬ ಬಿದ್ದು ಗಾಯಗೊಂಡಿದ್ದಾನೆ. ಈ ಮಾರ್ಗದಲ್ಲಿ ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಾಸ್ವೆಹಳ್ಳಿ–ಬುಳ್ಳಾಪುರ– ರಾಂಪುರ–ಹೊಟ್ಯಾಪುರ–ಹಿರೇಬಾಸೂರು–ಬೀರಗೊಂಡನಹಳ್ಳಿ– ಉಜ್ಜನಿಪುರ ಮಾರ್ಗವಾಗಿ ಹೊನ್ನಾಳಿಗೆ ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಒಂದು ಗಂಟೆಗೂ ಹೆಚ್ಚು ಕಾಲ ಬಸ್ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಂದ ಹೊನ್ನಾಳಿ ಡಿಪೊ ವ್ಯವಸ್ಥಾಪಕ ಎ.ಬಿ. ರಾಮಚಂದ್ರಪ್ಪ ಬಸ್‌ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.