ADVERTISEMENT

ಸಾಸ್ವೆಹಳ್ಳಿ: ಸಾರ್ವಜನಿಕ ಶೌಚಾಲಯ, ಬಸ್ ಶೆಲ್ಟರ್ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2024, 15:29 IST
Last Updated 4 ಅಕ್ಟೋಬರ್ 2024, 15:29 IST
ಸಾಸ್ವೆಹಳ್ಳಿಯ ಅಂಬೇಡ್ಕರ್ ವೃತ್ತದಲ್ಲಿರುವ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು
ಸಾಸ್ವೆಹಳ್ಳಿಯ ಅಂಬೇಡ್ಕರ್ ವೃತ್ತದಲ್ಲಿರುವ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯವನ್ನು ಶಾಸಕ ಡಿ.ಜಿ.ಶಾಂತನಗೌಡ ಉದ್ಘಾಟಿಸಿದರು    

ಸಾಸ್ವೆಹಳ್ಳಿ: ಇಲ್ಲಿನ ಅಂಬೇಡ್ಕರ್‌ ವೃತ್ತದಲ್ಲಿ ಬಸ್‌ ನಿಲ್ದಾಣಕ್ಕೆ ಹೊಂದಿಕೊಂಡಂತೆ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯವನ್ನು ಗುರುವಾರ ಉದ್ಘಾಟಿಸಲಾಯಿತು.

2021–22ನೇ ಸಾಲಿನ 15ನೇ ಹಣಕಾಸು ಯೋಜನೆ ಅಡಿ ಮತ್ತು ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿ ಸಾರ್ವಜನಿಕ ಶೌಚಾಲಯ ಮತ್ತು ಬಸ್ ನಿಲ್ದಾಣವನ್ನು ಅಂದಾಜು ₹ 30 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿತ್ತು. ಆದರೆ, ಜನರ ಬಳಕೆಗೆ ನೀಡಿರಲಿಲ್ಲ.

ಈ ಕುರಿತು ‘ಇದ್ದೂ ಇಲ್ಲದಂತಾಗಿರುವ ಸಾರ್ವಜನಿಕ ಶೌಚಾಲಯ’ ಶೀರ್ಷಿಕೆ ಅಡಿ ಸೆ.26ರಂದು ‘ಪ್ರಜಾವಾಣಿ’ಯಲ್ಲಿ ಸುದ್ದಿ ಪ್ರಕಟವಾಗಿತ್ತು.

ಎಚ್ಚೆತ್ತುಕೊಂಡ ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಾಸಕರು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಗುರುವಾರ ಸಂಜೆ ಮಳೆಯ ನಡುವೆಯೇ ಕಟ್ಟಡವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಪಟ್ಟರಾಜೇಗೌಡ ಉಪ ತಹಶೀಲ್ದಾರ್ ಚಂದ್ರಪ್ಪ, ಆರ್‌ಐ ದಿನೇಶ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಬ್ಬರ್ ಅಲಿಖಾನ್, ಗ್ರಾಮ ಪಂಚಾಯಿತಿ ಸದಸ್ಯರಾದ ಸುಲೇಮಾನ್ ಖಾನ್, ಶಾಂತಮ್ಮ, ಸುರೇಶ್, ಸವಿತಾ ನಾಡಿಗ್, ಮಂಜಪ್ಪ ಐನೂರು, ಪಿಡಿಒ ಹನುಮಮಂತ ನಾಯ್ಕ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.