ADVERTISEMENT

ಗಾಳಿಪಟ, ರಂಗೋಲಿಯಲ್ಲಿ ಮತ ಜಾಗೃತಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 5:23 IST
Last Updated 23 ಏಪ್ರಿಲ್ 2024, 5:23 IST
ಮತದಾನ ಜಾಗೃತಿಗಾಗಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಆಯೋಜಿಸಿದ್ದ ಗಾಳಿಪಟ ಸ್ಪರ್ಧೆಗೆ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಹಾಗೂ ಚುನಾವಣಾ ರಾಯಭಾರಿ ಪೃಥ್ವಿ ಶಾಮನೂರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದಾರೆ –ಪ್ರಜಾವಾಣಿ ಚಿತ್ರ
ಮತದಾನ ಜಾಗೃತಿಗಾಗಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಆಯೋಜಿಸಿದ್ದ ಗಾಳಿಪಟ ಸ್ಪರ್ಧೆಗೆ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಇಟ್ನಾಳ್ ಹಾಗೂ ಚುನಾವಣಾ ರಾಯಭಾರಿ ಪೃಥ್ವಿ ಶಾಮನೂರು ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದಾರೆ –ಪ್ರಜಾವಾಣಿ ಚಿತ್ರ   

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಹೈಸ್ಕೂಲ್ ಮೈದಾನದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ.ಇಟ್ನಾಳ್ ಮಾತನಾಡಿ, ‘ವಿಭಿನ್ನ ರೀತಿಯಲ್ಲಿ ಉನ್ನತ ಮಟ್ಟದಲ್ಲಿ ಗಾಳಿಪಟ ಹಾರಿಸುವ ಮೂಲಕ ಮತದಾನ ಜಾಗೃತಿ ಸಂದೇಶ ನೀಡಲಾಗಿದೆ. ಗಾಳಿಪಟವು ಹೇಗೆ ಸ್ವತಂತ್ರವಾಗಿ ಹಾರಾಡುತ್ತದೆಯೋ ಅದೇ ರೀತಿ ನೀವೂ ಸ್ವತಂತ್ರವಾಗಿ, ನ್ಯಾಯ ಸಮ್ಮತವಾಗಿ, ಯಾವುದೇ ಆಮಿಷಗಳಿಗೆ ಒಳಗಾಗದೆ ಮೇ 7ರಂದು ಮತ ಚಲಾಯಿಸಬೇಕು’ ಎಂದು ತಿಳಿಸಿದರು.

‘ಮತದಾರರ ಸಂದೇಹ, ಮಾಹಿತಿಗೆ 1950 ಬಳಸಿ’, ‘ಯಾವುದೇ ಮತದಾರರು ಮತದಾನದಿಂದ ಹೊರಗುಳಿಯಬಾರದು’, ‘ಮೇ 7ರಂದು ನಮ್ಮ ನಡೆ, ಮತಗಟ್ಟೆ ಕಡೆ’ ಎಂಬ ಘೋಷವಾಕ್ಯಗಳು ಗಾಳಿಪಟದಲ್ಲಿ ರಾರಾಜಿಸುತ್ತಿದ್ದವು.

ADVERTISEMENT

ಚುನಾವಣಾ ರಾಯಭಾರಿ ಚಿತ್ರನಟ ಪೃಥ್ವಿ ಶಾಮನೂರ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಪಶು ಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ಚಂದ್ರಶೇಖರ್ ಸುಂಕದ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಗಾಯಿತ್ರಿ ಕೆ.ಎಚ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬೇಬಿ ಸುನೀತಾ ಉಪಸ್ಥಿತರಿದ್ದರು.

ರಂಗೋಲಿ ಚಿತ್ತಾರ:

ನಗರದ ಗುರುಭವನದ ರಸ್ತೆಯಲ್ಲಿ ರಂಗೋಲಿ ಬಿಡಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಮಾತನಾಡಿ, ‘ಜಿಲ್ಲೆಯಾದ್ಯಂತ ಗ್ರಾಮೀಣ ಭಾಗದ ಹಳ್ಳಿಗಳಿಂದ ಬಂದಿರುವ ಅಂಗನವಾಡಿ ಸಹಾಯಕರು ಮತ್ತು ಕಾರ್ಯಕರ್ತರು ಬಗೆ ಬಗೆಯ ರಂಗೋಲಿಯ ಚಿತ್ರಗಳನ್ನು ಬಿಡುಸುವ ಮೂಲಕ ಮತದಾನ ಜಾಗೃತಿ ಮೂಡಿಸಿರುವುದು ಹೆಮ್ಮೆಯ ವಿಷಯವಾಗಿದೆ. ಮತದಾರರು ಸಹ ಹೆಮ್ಮೆಯಿಂದ ತಮ್ಮ ಮತ ಚಲಾಯಿಸುವಂತಾಗಬೇಕು’ ಎಂದರು.

ಜಿಲ್ಲಾ ಮಹಿಳಾ ಮಕ್ಕಳ ಅಭಿವೃದ್ಧಿ ಅಧಿಕಾರಿ ಅಶೋಕ್ ಕಾಂಬ್ಲೆ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೇತ್ರಾವತಿ ಜಿ., ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ದಾವಣಗೆರೆಯ ಗುರುಭವನ ರಸ್ತೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಆಯೋಜಿಸಿದ್ದ ರಂಗೋಲಿ ಸ್ಪರ್ದೇಯಲ್ಲಿ ಅಂಗನವಾಡಿ ಶಿಕ್ಷಕರು ರಂಗೋಲಿ ಬಿಡಿಸಿದರು –ಪ್ರಜಾವಾಣಿ ಚಿತ್ರ
ಮತದಾನ ಜಾಗೃತಿಗಾಗಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಗಾಳಿಪಟ ಸ್ಪರ್ಧೆ ನಡೆಯಿತು. –ಪ್ರಜಾವಾಣಿ ಚಿತ್ರ/ಸತೀಶ್ ಬಡಿಗೇರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.