ADVERTISEMENT

ದಾವಣಗೆರೆ: ವಿಶ್ವ ತಂಬಾಕು ರಹಿತ ದಿನಾಚರಣೆ, ಜಾಗೃತಿ ಜಾಥಾ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 4:00 IST
Last Updated 1 ಜೂನ್ 2022, 4:00 IST
ವಿಶ್ವ ತಂಬಾಕು ರಹಿತ ದಿನಾಚರಣೆ 2022ರ ಅಂಗವಾಗಿ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ ನಾಯಕ್ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು
ವಿಶ್ವ ತಂಬಾಕು ರಹಿತ ದಿನಾಚರಣೆ 2022ರ ಅಂಗವಾಗಿ ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಮುಂಭಾಗದಲ್ಲಿ ಆಯೋಜಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ ನಾಯಕ್ ಅವರು ಪೋಸ್ಟರ್ ಬಿಡುಗಡೆಗೊಳಿಸಿದರು   

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಗಟೇರಿ ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಮಂಗಳವಾರ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ವಿಶ್ವ ತಂಬಾಕು ರಹಿತ ದಿನ– 2022’ ಜಾಗೃತಿ ಜಾಥಾ ನಡೆಯಿತು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರವೀಣ್ ನಾಯಕ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ತಂಬಾಕು ಪರಿಸರಕ್ಕೆ ಮಾರಕ ಎಂಬ ಪ್ರಸಕ್ತ ವರ್ಷದ ಘೋಷಣೆ ಹಾಗೂ ಗಿಡ ನೆಡಿ ತಂಬಾಕು ಬಿಡಿ ಎಂಬ ಬಿತ್ತಿ ಪತ್ರಗಳನ್ನು ಒಳಗೊಂಡ ಕಾಲ್ನಡಿಗೆ ಜಾಥವು ಜನರಲ್ಲಿ ಜಾಗೃತಿ ಮೂಡಿಸಲು ವಿವಿಧ ಘೋಷಣೆಗಳನ್ನು ಕೂಗಲಾಯಿತು. ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಹೊರಟು ಬಾಪೂಜಿ ಆಸ್ಪತ್ರೆಯ ಮಾರ್ಗವಾಗಿ ಪುನಃ ಜಿಲ್ಲಾ ಆಸ್ಪತ್ರೆಗೆ ಜಾಥಾ ತಲುಪಿತು.

ADVERTISEMENT

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಜಿಲ್ಲಾ ಮಲೇರಿಯ ನಿಯಂತ್ರಣಾಧಿಕಾರಿ ಡಾ.ಕೆ. ನಟರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ಎನ್.ಸಿ.ಸಿ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.