ADVERTISEMENT

ಹುಬ್ಬಳ್ಳಿ | 108 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ವಶ

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 15:39 IST
Last Updated 4 ಜುಲೈ 2024, 15:39 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ವಲಯ ಕಚೇರಿ -11ರ ವ್ಯಾಪ್ತಿಯ ವಾರ್ಡ್ 67ರ ಕಂಚಗಾರ್ ಗಲ್ಲಿ ಕ್ರಾಸ್, ಪ್ರಥಮ ಶೆಟ್ಟಿ ಓಣಿಯಲ್ಲಿ ಗುರುವಾರ ನ್ಯೂ ವಿಶಾಲ್ ಎಂಟರ್‌ಪ್ರೈಸಸ್‌ ಅಂಗಡಿ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 108.2 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡರು.

ಖಚಿತ ಮಾಹಿತಿ ಆಧರಿಸಿ ಅಂಗಡಿಯ ಮೊದಲನೇ ಮಹಡಿಯಲ್ಲಿನ ಗೋದಾಮಿನಲ್ಲಿ ಪ್ಲಾಸ್ಟಿಕ್ ಸಂಗ್ರಹಿಸಲಾಗಿದ ಎಂಬ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಯಿತು. ಪ್ಲಾಸ್ಟಿಕ್ ವಶಪಡಿಸಿಕೊಂಡು ಗೋದಾಮು ಸೀಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ADVERTISEMENT

ಆರೋಗ್ಯ ನಿರೀಕ್ಷಕ ನೂರಂದಪ್ಪ ಭಜಂತ್ರಿ, ದೀಪಿಕಾ ಆರ್., ವಾರ್ಡ್ ಸೂಪರ್‌ವೈಸರ್‌ ಮಂಜುನಾಥ್ ಇದ್ದರು.

₹7 ಸಾವಿರ ದಂಡ: ಮಹಾನಗರ ಪಾಲಿಕೆಯ ವಲಯ ಕಚೇರಿ 3ಮತ್ತು 9ರ ವ್ಯಾಪ್ತಿಯ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 22 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡು 7 ಸಾವಿರ ದಂಡ ವಿಧಿಸಿದ್ದಾರೆ.

ಆರೋಗ್ಯ ನಿರೀಕ್ಷಕರಾದ ಮಧುಕೇಶ್ವರ ರಾಯ್ಕರ್, ಯಲ್ಲಪ್ಪ ನೇತೃತ್ವದ ತಂಡವು ದಾಳಿ ನಡೆಸಿತು. ಮತ್ತೆ ಏಕಬಳಕೆಯ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದುದು ಕಂಡು ಬಂದರೆ ಟ್ರೇಡ್ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.