ADVERTISEMENT

ಹುಬ್ಬಳ್ಳಿ: ದಾಖಲೆಗಳಿಲ್ಲದ ₹3 ಕೋಟಿ ವಶ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 20:15 IST
Last Updated 4 ಮಾರ್ಚ್ 2023, 20:15 IST
   

ಹುಬ್ಬಳ್ಳಿ: ನಗರದ ಉದ್ಯಮಿ ರಮೇಶ ಬೋನಗೇರಿ ಮನೆಯಲ್ಲಿ ದಾಖಲೆಗಳಿಲ್ಲದೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₹ 500 ಮುಖ ಬೆಲೆಯ ₹ 3 ಕೋಟಿ ನಗದನ್ನು ಸಿಸಿಬಿ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಎಸಿಪಿ ನಾರಾಯಣ ಭರಮನಿ ನೇತೃತ್ವದ ತಂಡ ಭವಾನಿನಗರದಲ್ಲಿ ಇರುವ ರಮೇಶ ಬೋನಗೇರಿ ಅವರ ಮನೆ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಣವನ್ನು ಪತ್ತೆ ಹಚ್ಚಿದೆ.

ಹಣಕ್ಕೆ ಸಂಬಂಧಿಸಿದ ದಾಖಲೆ, ಸರಿಯಾದ ಮಾಹಿತಿ ನೀಡದ ಕಾರಣ ಹಣ ಜಪ್ತಿ ಮಾಡಲಾಗಿದೆ. ಅಶೋಕನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

ADVERTISEMENT

‘ತನಿಖೆ ಮುಂದುವರಿದಿದೆ. ಹೆಚ್ಚಿನ ಪರಿಶೀಲನೆಗೆ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ. ಇನ್‌ಸ್ಪೆಕ್ಟರ್‌ ಎಸ್‌.ಕೆ. ಪಟ್ಟಣಕುಡೆ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಲಾಗಿದೆ’ ಎಂದು ಕಮಿಷನರ್‌ ರಮನ್‌ ಗುಪ್ತಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.