ADVERTISEMENT

ದಲಿತ ಚಳವಳಿಗೆ 50 ವರ್ಷ | 10ರಂದು ಬೆಂಗಳೂರಲ್ಲಿ ಕಾರ್ಯಕ್ರಮ: ಲಕ್ಷ್ಮಣ್ ಬಕ್ಕಾಯಿ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:04 IST
Last Updated 2 ಜುಲೈ 2024, 16:04 IST

ಕಲಘಟಗಿ: ‘ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಚಳವಳಿಗೆ 50 ವರ್ಷ ತುಂಬಿದ್ದರಿಂದ ಜುಲೈ 10ರಂದು ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಸಮಾರಂಭ ನಡೆಯಲಿದೆ’ ಎಂದು ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಕಾರ್ಯಾಧ್ಯಕ್ಷ ಲಕ್ಷ್ಮಣ್ ಬಕ್ಕಾಯಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು’ ಎಂದು ಕರೆ ನೀಡಿದರು.

ಜಿಲ್ಲಾ ಸಮಿತಿ ಪದಾಧಿಕಾರಿ ಮಾದೇವ ಮಾದರ್ ಮಾತನಾಡಿ, ‘ಕೃಷ್ಣಪ್ಪ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು, ಬಗರ್ ಹುಕುಂ ಸಾಗುವಳಿ ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು, ಅರಣ್ಯ ಭೂಮಿ ಸಾಗುವಳಿ ಸೇರಿದಂತೆ ನಮೂನೆ 57ರ ಅರ್ಜಿ ಸಲ್ಲಿಸಿರುವ ಸಾಗುವಳಿದಾರರಿಗೆ ಪುನಃ ಅರ್ಜಿ ಹಾಕಲು ಅವಕಾಶ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು’ ಎಂದರು.

ADVERTISEMENT

ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಶ್ ಹೊಸಮನಿ, ಮುಖಂಡರಾದ ಸುರೇಶ್ ದೊಡ್ಡಮನಿ, ಅಣ್ಣಯ್ಯ ಮಾದರ್, ಕನಕಪ್ಪ ಹರಿಜನ, ಫಕೀರಪ್ಪ ಮಾದರ್, ಶಶಿ ಕಟ್ಟೀಮನಿ, ಉದಯ ಗೌಡರ, ವಕೀಲ ರಮೇಶ್ ಸೋಲಾರಗೊಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.