ಹುಬ್ಬಳ್ಳಿ: ಇಲ್ಲಿನ ಚಾರ್ಟರ್ಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್ ಸವಾರಿ ಮಾಡಿರುವುದು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲಾಗಿದೆ.
ಅವರು ಏಪ್ರಿಲ್‌ನಿಂದ ಆಗಸ್ಟ್‌ವರೆಗೆ 100 ದಿನಗಳ ಕಾಲ ಪ್ರತಿದಿನ 50 ಕಿ.ಮೀ ಸೈಕಲ್ ಸವಾರಿ ಮಾಡಿದರು. ಇದಕ್ಕೂ ಮೊದಲು ಅವರು ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ನಿಂದ 2020–21 ಹಾಗೂ 2021–22 ಸಾಲಿನಲ್ಲಿ ಹಲವು ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.