ADVERTISEMENT

ಹುಬ್ಬಳ್ಳಿ: ಬೇಡಿಕೆ ಈಡೇರಿಕೆಗೆ ಆಗ್ರಹ; ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2023, 6:48 IST
Last Updated 15 ಸೆಪ್ಟೆಂಬರ್ 2023, 6:48 IST
   

ಹುಬ್ಬಳ್ಳಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗೌರವ ಧನ ಹೆಚ್ಚಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್'ನ ಹುಬ್ಬಳ್ಳಿ ತಾಲ್ಲೂಕು ಸಮಿತಿ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಧರಣಿ ನಡೆಸಿ ತಹಶೀಲ್ದಾರ್'ಗೆ ಮನವಿ ಸಲ್ಲಿಸಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ₹15ಸಾವಿರ, ಸಹಾಯಕಿಯರಿಗೆ ₹10 ಸಾವಿರ ಗೌರವಧನ ಹೆಚ್ಚಿಸಬೇಕು. ನಿವೃತ್ತರಿಗೆ ₹3 ಲಕ್ಷ ಆರ್ಥಿಕ ನೆರವು ನೀಡಬೇಕು. ಅಂಗನವಾಡಿ ವ್ಯವಸ್ಥೆ ವಿರುದ್ಧವಾಗಿರುವ ಶಿಶುಪಾಲನಾ ಕೇಂದ್ರ ಮತ್ತು ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲು ಸರ್ಕಾರ ಹೊರಡಿಸಿರುವ ಆದೇಶ ವಾಪಸ್ ಪಡೆಯಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ, ಯು.ಕೆ.ಜಿ ನಡೆಸಲು ಸೌಲಭ್ಯ ಕಲ್ಪಿಸಬೇಕು. ಉಪಧನ ಪಡೆಯಲು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಅರ್ಹರು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಎ.ಎಸ್. ಪೀರ್ಜಾದೆ, ಬತುಲ ಕಿಲ್ಲೆದಾರ, ಶಿವಗಂಗಾ ಹೆಬ್ಬಳ್ಳಿ, ಹೇಮಲತಾ ಶಿವಮಠ, ಸಾವಿತ್ರಿ ಸಣ್ಣಪ್ಪನವರ, ಹೇಮಾ ಮೀರಜಕರ, ರೇಖಾ ಮೀರಜಕರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.