ಹುಬ್ಬಳ್ಳಿ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ 2024-25ನೇ ಸಾಲಿನ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲೆಗಳೊಂದಿಗೆ https://ssp.postmatric.karnataka.gov.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಈಗಾಗಲೇ ಖಾತೆ ರಚಿಸಿದ ವಿದ್ಯಾರ್ಥಿಗಳು https://ssp.postmatric.karnataka.gov.in/ssppre/ ವೆಬ್‌ಸೈಟ್ ಮೂಲಕ ಅರ್ಜಿಯನ್ನು ಪೂರ್ಣಗೊಳಿಸಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಹುಬ್ಬಳ್ಳಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 0836-2278066, ಮೊ: 9480843124 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.