ಹುಬ್ಬಳ್ಳಿ: ‘ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಸ್ಪರ್ಧಿಸಲು ಮೂರು ಕ್ಷೇತ್ರಗಳಲ್ಲಿ ಅವಕಾಶ ನೀಡಬೇಕೆಂದು ಹೈಕಮಾಂಡ್ಗೆ ಕೇಳಿದ್ದೇವೆ’ ಎಂದು ವಸತಿ ಸಚಿವ ಜಮೀರ ಅಹ್ಮದ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬೆಂಗಳೂರು ಸೆಂಟ್ರಲ್, ಹಾವೇರಿ ಹಾಗೂ ಬೀದರ್ ಲೋಕಸಭಾ ಕ್ಷೇತ್ರಗಳನ್ನು ಕೇಳಿದ್ದೇವೆ. ನಮ್ಮ ಬೇಡಿಕೆಯನ್ನು ಪಕ್ಷದ ಹೈಕಮಾಂಡ್ ಮುಂದೆ ಇಟ್ಟಿದ್ದೇವೆ. ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನೋಡೋಣ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.