ಹುಬ್ಬಳ್ಳಿ: ‘ಚನ್ನಪಟ್ಟಣ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಬೇಕು ಎಂಬುದು ನಮ್ಮ ಪಕ್ಷದ ಅಭಿಪ್ರಾಯ. ಎಚ್.ಡಿ.ಕುಮಾರಸ್ವಾಮಿ ಟಿಕೆಟ್ ತ್ಯಾಗ ಮಾಡಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
‘ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕೈಜೋಡಿಸಿದ್ದರಿಂದ ನಮಗೆ ಅನುಕೂಲವಾಗಿದೆ. ಇದರಿಂದ ಜೆಡಿಎಸ್‌ಗೂ ಪುನರ್ಜನ್ಮ ಸಿಕ್ಕಿದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
‘ಹಳೆ ಹುಬ್ಬಳ್ಳಿ ಗಲಭೆಯ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುವ ನಿರ್ಧಾರ ಕೈಗೊಂಡಿರುವುದು ದುರದೃಷ್ಟಕರ. ಈಗ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಪ್ರಕರಣದ ಆರೋಪಿಗಳು ಸಹ ತಮ್ಮ ವಿರುದ್ಧದ ಪ್ರಕರಣ ಹಿಂಪಡೆಯುವಂತೆ ಕೇಳುತ್ತಿದ್ದಾರೆ. ಬಿಜೆಪಿ ಸರ್ಕಾರ ಇದ್ದಾಗ ರೈತರ ಮೇಲಿನ ಪ್ರಕರಣಗಳನ್ನು ಮಾತ್ರ ಹಿಂಪಡೆಯಲಾಗಿತ್ತು’ ಎಂದು ಹೇಳಿದರು.
‘ರಾಜ್ಯದಲ್ಲಿ ಆರೂವರೆ ಲಕ್ಷ ಎಕರೆ ವಕ್ಫ್ ಆಸ್ತಿ ಇದ್ದು, ದೆಹಲಿಯ ಹೊಸ ಸಂಸತ್ ಭವನದ ಜಾಗ ಸಹ ತಮ್ಮದು ಎಂದು ಮುಸ್ಲಿಮರು ಹೇಳುತ್ತಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪೂರ್ವಜರು ಮೊಘಲರು, ಟಿಪ್ಪು ಸುಲ್ತಾನ್ ಕಾಲದಲ್ಲಿ ಮತಾಂತರಗೊಂಡವರು. ಅವರಿಗೆ ಈ ದೇಶದ ಮೇಲೆ ಯಾವುದೇ ಹಕ್ಕಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.