ADVERTISEMENT

ಹುಬ್ಬಳ್ಳಿ | ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಸಿಎಂ, ಡಿಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 7:43 IST
Last Updated 20 ಜೂನ್ 2024, 7:43 IST
<div class="paragraphs"><p>ಪೆಟ್ರೋಲ್ ಹಾಗೂ ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಗುರುವಾರ ನಗರದ ಪಿಬಿ ರಸ್ತೆಯ ನ್ಯೂ ಇಂಗ್ಲಿಷ್‌ ಸ್ಕೂಲ್‌ ವೃತ್ತದ ಬಳಿ ರಸ್ತೆ ತಡೆ ಮಾಡಿ, ಪ್ರತಿಭಟನೆ ನಡೆಸಲಾಯಿತು.</p></div>

ಪೆಟ್ರೋಲ್ ಹಾಗೂ ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಗುರುವಾರ ನಗರದ ಪಿಬಿ ರಸ್ತೆಯ ನ್ಯೂ ಇಂಗ್ಲಿಷ್‌ ಸ್ಕೂಲ್‌ ವೃತ್ತದ ಬಳಿ ರಸ್ತೆ ತಡೆ ಮಾಡಿ, ಪ್ರತಿಭಟನೆ ನಡೆಸಲಾಯಿತು.

   

ಹುಬ್ಬಳ್ಳಿ: ಪೆಟ್ರೋಲ್ ಹಾಗೂ ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ ಹಿಂಪಡೆಯಬೇಕು ಎಂದು ಒತ್ತಾಯಿಸಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವತಿಯಿಂದ ಗುರುವಾರ ನಗರದ ಪಿಬಿ ರಸ್ತೆಯ ನ್ಯೂ ಇಂಗ್ಲಿಷ್‌ ಸ್ಕೂಲ್‌ ವೃತ್ತದ ಬಳಿ ರಸ್ತೆ ತಡೆ ಮಾಡಿ, ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಬಿಜೆಪಿ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ, ಇಂಧನ ಬೆಲೆ ಏರಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಈ ವೇಳೆ ಮಾತನಾಡಿದ ಪಾಲಿಕೆ ಸದಸ್ಯ, ಬಿಜೆಪಿ ಮುಖಂಡ ಶಿವಕುಮಾರ ಮೆಣಸಿನಕಾಯಿ, ‘ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಳದಿಂದ ಸಹಜವಾಗಿ ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ. ಇದರಿಂದಾಗಿ ಅಕ್ಕಿ, ಬೇಳೆ, ಅಡುಗೆ ಎಣ್ಣೆ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಇನ್ನೂ ದುಬಾರಿಯಾಗಲಿದೆ. ಇದರಿಂದ ಬಡವರು ಬದುಕು ದುಸ್ತರವಾಗಲಿದೆ. ಕೂಡಲೇ ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳವನ್ನು ಹಿಂಪಡೆಯಬೇಕು‘ ಎಂದು ಒತ್ತಾಯಿಸಿದರು.

ಸಿಎಂ, ಡಿಸಿಎಂ ಪ್ರತಿಕೃತಿ ದಹಿಸಿ ಆಕ್ರೋಶ

ಹು-ಧಾ ಪೂರ್ವ ಕ್ಷೇತದ ಅಧ್ಯಕ್ಷ ಪ್ರಭು ನವಲಗುಂದಮಠ, ಮುಖಂಡರಾದ ದತ್ತುಮೂರ್ತಿ ಕುಲಕರ್ಣಿ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಸತೀಶ್ ಶೇಜವಾಡಕರ, ರಂಗಾ ಬದ್ದಿ, ಹು-ಧಾ ಪೂರ್ವ ಕ್ಷೇತದ ಪ್ರಧಾನ ಕಾರ್ಯದರ್ಶಿ ಜಗದೀಶ್ ಬುಳ್ಳಾನವರ, ರಾಜು ಜರತಾರಾಘರ್, ಪಾಲಿಕೆ ಸದಸ್ಯ ರಾಧಾಬಾಯಿ ಸಾಫರೆ, ಪ್ರೀತಿ ಲದವಾ, ಚಂದ್ರಶೇಖರ ಗೋಕಾಕ್, ಲಕ್ಷ್ಮೀಕಾಂತ ಘೋಡಕೆ, ನಾಗರಾಜ ಟಗರಗುಂಟಿ ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.