ADVERTISEMENT

ಕಳಸಾ ಬಂಡೂರಿ ಯೋಜನೆ ಡಿಪಿಆರ್‌ಗೆ ಅನುಮೋದನೆ: ಹುಬ್ಬಳ್ಳಿಯಲ್ಲಿ ಬಿಜೆಪಿ ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 1 ಜನವರಿ 2023, 8:29 IST
Last Updated 1 ಜನವರಿ 2023, 8:29 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಬಿಜೆಪಿಯಿಂದ ಹುಬ್ಬಳ್ಳಿಯಲ್ಲಿ ಭಾನುವಾರ ವಿಜಯೋತ್ಸವ ನಡೆಯಿತು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಬಿಜೆಪಿಯಿಂದ ಹುಬ್ಬಳ್ಳಿಯಲ್ಲಿ ಭಾನುವಾರ ವಿಜಯೋತ್ಸವ ನಡೆಯಿತು.   

ಹುಬ್ಬಳ್ಳಿ: ಉತ್ತರ ಕರ್ನಾಟಕದ ದಶಕಗಳ ಹೋರಾಟದ ಮಹದಾಯಿ ಕಳಸಾ ಬಂಡೂರಿ ಯೋಜನೆ ಡಿಪಿಆರ್‌ಗೆ ಕೇಂದ್ರ ಜಲ‌ ಆಯೋಗ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಬಿಜೆಪಿಯಿಂದ ನಗರದಲ್ಲಿ ಭಾನುವಾರ ವಿಜಯೋತ್ಸವ ರ‌್ಯಾಲಿ ನಡೆಯಿತು.

ನೆಹರು ಮೈದಾನದಿಂದ ಹೊರಟ ರ‌್ಯಾಲಿ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಲ್ಯಾಮಿಂಗ್ಟನ್ ರಸ್ತೆ, ಸಿದ್ದಪ್ಪ ಕಂಬಳಿ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಹಾದು ಚನ್ನಮ್ಮ ವೃತ್ತ ತಲುಪಿತು. ಜಾನಪದ ಕಲಾ ತಂಡಗಳು ಹಾಗೂ ಡೊಳ್ಳು ವಾದ್ಯ ಮೆರಗು ತಂದಿತು.

ಸಚಿವ ಜೋಶಿ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು. ಕಾರ್ಯಕರ್ತರು ರ‌್ಯಾಲಿಯುದ್ದಕ್ಕೂ ಭಾರತ ಮಾತಾಕೀ‌ ಜೈ ಎಂದು ಘೋಷಣೆ ಕೂಗಿದರು‌. ಪ್ರಲ್ಹಾದ ಜೋಶಿ ಅವರಿಗೆ ಜೈಕಾರ ಹಾಕುತ್ತಾ ಸಾಗಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬೊಮ್ಮಾಯಿ‌, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಾವಚಿತ್ರಗಳನ್ನು ಪ್ರದರ್ಶಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.