ADVERTISEMENT

ಕನ್ನಡ ಹೆಸರುಗಳ ಬದಲಾವಣೆ- ಗೃಹ ಸಚಿವರ ಗಮನಕ್ಕೆ ತರುವೆ: ಸಚಿವ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 28 ಜೂನ್ 2021, 9:25 IST
Last Updated 28 ಜೂನ್ 2021, 9:25 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ   

ಹುಬ್ಬಳ್ಳಿ: ’ಕೇರಳದ ಕಾಸರಗೋಡು ಜಿಲ್ಲೆಯ ಊರುಗಳ ಕನ್ನಡ ಹೆಸರಿನ ಬದಲಾವಣೆ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತರಲಾಗುವುದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಈ ಕುರಿತು ಗೃಹ ಸಚಿವರ ಗಮನಕ್ಕೆ ತಂದರೆ, ಅವರು ಕೇರಳದ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲಿದ್ದಾರೆ’ ಎಂದರು.

ಹಾಸ್ಯಾಸ್ಪದ: ’ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವದಲ್ಲಿದೆ. ಹಾಗಾಗಿ, ಇಲ್ಲಿ ಅಧಿಕಾರಕ್ಕಾಗಿ ನಾಯಕರ ಮಧ್ಯೆ ಪೈಪೋಟಿ ಸಹಜ. ಆದರೆ, ಅಧಿಕಾರವಿಲ್ಲದಿದ್ದರೂ ಕಾಂಗ್ರೆಸ್‌ನಲ್ಲಿ ಸಿ.ಎಂ ಖುರ್ಚಿಗೆ ಈಗಲೇ ಬಡಿದಾಟ ನಡೆಯುತ್ತಿರುವುದು ಹಾಸ್ಯಾಸ್ಪದವಾಗಿದೆ’ ಎಂದು ವ್ಯಂಗ್ಯವಾಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.