ADVERTISEMENT

ಗ್ರಾಮೀಣ ಭಾಗದಲ್ಲಿ ಬಿಎಸ್‌ಎನ್‌ಎಲ್ 4ಜಿ ಸೇವೆ ಶೀಘ್ರ: ಧನಂಜಯಕುಮಾರ್‌ ತ್ರಿಪಾಠಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2024, 15:32 IST
Last Updated 2 ಫೆಬ್ರುವರಿ 2024, 15:32 IST
ಬಿಎಸ್‌ಎನ್‌ಎಲ್
ಬಿಎಸ್‌ಎನ್‌ಎಲ್   

ಹುಬ್ಬಳ್ಳಿ: ‘ಮೇಕ್‌ ಇನ್‌ ಇಂಡಿಯಾ’ ಯೋಜನೆ ಭಾಗವಾಗಿ ಸಂಪೂರ್ಣ ಸ್ವದೇಶಿ ತಂತ್ರಜ್ಞಾನದ ಮೂಲಕ ಅಭಿವೃದ್ಧಿಪಡಿಸಲಾಗಿರುವ 4ಜಿ ಸೇವೆಯನ್ನು ಗ್ರಾಮೀಣ ಭಾಗದಲ್ಲಿ ಒದಗಿಸಲು ಬಿಎಸ್‌ಎನ್‌ಎಲ್ ಸಜ್ಜಾಗಿದೆ’ ಎಂದು ಹುಬ್ಬಳ್ಳಿ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಧನಂಜಯಕುಮಾರ್‌ ತ್ರಿಪಾಠಿ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಯಾವುದೇ ಖಾಸಗಿ ಕಂಪನಿಯ ನೆಟ್‌ವರ್ಕ್ ಸೌಲಭ್ಯಗಳಿಲ್ಲದ ಪ್ರದೇಶಗಳನ್ನು ಗುರುತಿಸಿ ಬಿಎಸ್‌ಎನ್‌ಎಲ್ ಸೇವೆ ತಲುಪಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಪ್ರತಿ ಗ್ರಾಮಗಳಿಗೂ ಆಪ್ಟಿಕಲ್ ಫೈಬರ್ ಮೂಲಕ ಗ್ರಾಹಕರಿಗೆ ಹೊರೆಯಾಗದಂತೆ ಕಡಿಮೆ ದರದಲ್ಲಿ ಇಂಟರ್‌ನೆಟ್‌ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

‘ಗ್ರಾಹಕರಿಗೆ ಬ್ರಾಡ್‌ಬ್ಯಾಂಡ್ ಸೇವೆ ಒದಗಿಸಲು ಮತ್ತು ನಿರ್ವಹಿಸಲು ಕಮಿಷನ್ ಆಧಾರದ ಮೇಲೆ ಫೈಬರ್ ಟು ದಿ ಹೋಮ್ (ಎಫ್‌ಟಿಟಿಚ್) ಪಾಲುದಾರರನ್ನು ನೇಮಕ ಮಾಡಿಕೊಳ್ಳುತ್ತಿದೆ. ಪಾಲುದಾರರಾಗಲು ಯಾವುದೇ ಸ್ಟಾರ್ಟಪ್‌ಗಳು, ಬಿಲ್ಡರ್‌ಗಳು, ಉದ್ಯಮಿಗಳು ಹಾಗೂ ವ್ಯಕ್ತಿಗಳು ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದರು.

ADVERTISEMENT

‘ಗ್ರಾಮಗಳಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್ ಸಮಸ್ಯೆ ಆಗದಂತೆ ಧಾರವಾಡ ಜಿಲ್ಲೆಯ 13, ಗದಗ ಜಿಲ್ಲೆಯ 4 ಹಾಗೂ ಹಾವೇರಿ ಜಿಲ್ಲೆಯ 8 ಗ್ರಾಮಗಳಲ್ಲಿ ಟವರ್‌ಗಳನ್ನು ಅಳವಡಿಸಲಾಗುತ್ತಿದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಎಸ್‌ಎನ್‌ಎಲ್‌ ಹುಬ್ಬಳ್ಳಿ ವಿಭಾಗದ ಅಧಿಕಾರಿಗಳಾದ ರಾಜಕುಮಾರ ಆಸಂಗಿ, ಸತೀಶ ಆಸಂಗಿ, ರಾಜೇಂದ್ರ ಕದಂ, ರಾಜೇಂದ್ರ ಕುಲಕರ್ಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.