ADVERTISEMENT

ನಾಲ್ವಡಿ ಕೃಷ್ಣರಾಜ ಒಡೆಯರ್‌ ಕೊಡುಗೆ ಅಪಾರ: ಜಗದೀಶ ಕೊಪ್ಪ

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 4:56 IST
Last Updated 5 ಜೂನ್ 2022, 4:56 IST
ಹುಬ್ಬಳ್ಳಿಯ ಎಸ್‌ಜೆಎಂವಿಎಸ್‌ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು
ಹುಬ್ಬಳ್ಳಿಯ ಎಸ್‌ಜೆಎಂವಿಎಸ್‌ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು   

ಹುಬ್ಬಳ್ಳಿ: ‘ಮೈಸೂರು ಪ್ರಾಂತ್ಯದ ಅಭಿವೃದ್ಧಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಅಪಾರ ಕೊಡುಗೆ ನೀಡಿದರು. ಅವರ ಆಡಳಿತ ವೈಖರಿ ಇಂದಿನ ಜನಪ್ರತಿನಿಧಿಗಳಿಗೆ ಮಾದರಿಯಾಗಿದೆ’ ಎಂದು ಪತ್ರಕರ್ತ ಜಗದೀಶ ಕೊಪ್ಪ ಹೇಳಿದರು.

ನಗರದ ಎಸ್‌ಜೆಎಂವಿಎಸ್‌ ಕಲಾ ಹಾಗೂ ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ 138ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬ್ರಿಟಿಷರಿಗೆ ಕಪ್ಪ ಸಲ್ಲಿಸಿದರೂ, ಅವರಲ್ಲಿದ್ದ ಎಂಜಿಯರ್‌ಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿಸಿದ್ದ ರು. ಅವರು ಮೈಸೂರನ್ನು ದೇಶದ ಅಪರೂಪದ ಸಂಸ್ಥಾನವಾಗಿಸಿದ್ದರು. ಉತ್ತರ ಕರ್ನಾಟಕದಲ್ಲಿ ಹಿಂದೂಸ್ಥಾನಿ ಸಂಗೀತ ಪಸರಿಸಲು ಕಾರಣರಾದರು’ ಎಂದು ಬಣ್ಣಿಸಿದರು.

ADVERTISEMENT

‘ಶಿಕ್ಷಣದ ಅಭಿವೃದ್ಧಿಗಾಗಿ ಮೈಸೂರಿನಲ್ಲಿ 600 ಎಕರೆ ಭೂಮಿಯನ್ನು ದಾನವಾಗಿ ನೀಡಿದರು. ಮಹಿಳಾ ಶಿಕ್ಷಣಕ್ಕೆ ಮಹತ್ವ ನೀಡಿದ ಅವರು, ದೇವದಾಸಿ ಪದ್ಧತಿ ನಿರ್ಮೂಲನೆಗೆ ಕಾಯ್ದೆ ಜಾರಿ ಮಾಡಿದರು. ನೀರಾವರಿ ಯೋಜನೆಗಳಿಗೆ ಒತ್ತು ನೀಡಿದರು. ಕೆಆರ್‌ಎಸ್‌ ಅಣೆಕಟ್ಟು ಕಟ್ಟುವಾಗ ಹಣದ ಕೊರೆತೆ ಎದುರಾಗಿ, ತಮ್ಮಲ್ಲಿದ್ದ ಚಿನ್ನವನ್ನು ಮಾರಿದ್ದರು. ಕೈಗಾರಿಕಾ ಕ್ರಾಂತಿ, ಪ್ರಜಾಪ್ರತಿನಿಧಿ ಸಭೆ ಮೂಲಕ ಸುಧಾರಣೆ ತಂದರು’ ಎಂದು ಹೇಳಿದರು.

ಸಂಗೀತ ವಿಭಾಗದ ಮುಖ್ಯಸ್ಥೆ ಡಾ. ಜ್ಯೋತಿಲಕ್ಷ್ಮೀ ಡಿ.ಪಿ. ಅವರು ಹಿಂದೂಸ್ಥಾನಿ ಸಂಗೀತ ಪ್ರಸ್ತುತಪಡಿಸಿದರು. ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಲಿಂಗರಾಜ ಅಂಗಡಿ, ನಿವೃತ್ತ ಪ್ರಾಧ್ಯಾಪಕ ಕೆ.ಎಸ್‌. ಕೌಜಲಗಿ, ಮಲ್ಲಿಕಾರ್ಜುನ ಶಿವಳ್ಳಿ, ಚಂದ್ರಶೇಖರ, ಚನ್ನಬಸಪ್ಪ
ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.