ADVERTISEMENT

ಧಾರವಾಡ | ಅ.7ಕ್ಕೆ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲಾ ಭೇಟಿ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2023, 14:43 IST
Last Updated 5 ಅಕ್ಟೋಬರ್ 2023, 14:43 IST
<div class="paragraphs"><p>ಬರ (ಪ್ರಾತಿನಿಧಿಕ ಚಿತ್ರ)</p></div>

ಬರ (ಪ್ರಾತಿನಿಧಿಕ ಚಿತ್ರ)

   

ಧಾರವಾಡ: ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರ ತಂಡವು ಅ. 7 ರಂದು ಭೇಟಿ ನೀಡಲಿದ್ದು, ಬೆಳೆಹಾನಿ ಪರಿಶೀಲನೆ ನಡೆಸಲಿದೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತಕುಮಾರ್ ಸಾಹು, ಎಣ್ಣೆ ಬೀಜಗಳ ಅಭಿವೃದ್ದಿ ಇಲಾಖೆ ನಿರ್ದೇಶಕ ಜೆ.ಪೆನ್ನುನಸ್ವಾಮಿ, ವೆಚ್ಚ ವ್ಯವಹಾರಗಳ ಇಲಾಖೆ ಸಹಾಯಕ ನಿರ್ದೇಶಕ ಮಹೇಂದ್ರ ಚಂಡೇಲಿಯ, ನೀತಿ ಆಯೋಗದ ಸಂಶೋಧನಾಧಿಕಾರಿ ಶಿವಚರಣ್ ಮೀನಾ ಹಾಗೂ ರಾಜ್ಯ ಕೃಷಿ ಆಯುಕ್ತ ವೈ.ಎಸ್ ಪಾಟೀಲ್ ತಂಡವು ಜಿಲ್ಲೆಯ ವಿವಿಧೆಡೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಲಿದೆ.

ADVERTISEMENT

ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಬೆಳೆಹಾನಿ, ಮಳೆ ಪ್ರಮಾಣ ಇತ್ಯಾದಿ ಕುರಿತು ತಂಡಕ್ಕೆ ವಿವರ ನೀಡುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.