ಹುಬ್ಬಳ್ಳಿ: ‘ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ನೀಡುವ ‘ಚುಟುಕು ಭೂಷಣ’ ಗೌರವ ಪ್ರಶಸ್ತಿ–2024ಕ್ಕೆ ಚುಟುಕು ಸಾಹಿತ್ಯದಲ್ಲಿ ಸಾಧನೆ ಮಾಡಿದ ನಾಡಿನ ನಾಲ್ವರು ಶ್ರೀಗಳು ಸೇರಿ ಆರು ಜನರನ್ನು ಆಯ್ಕೆ ಮಾಡಲಾಗಿದೆ’ ಎಂದು ಪರಿಷತ್‌ನ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಹರಿಹರ ಪುರ ಶಂಕರಮಠದ ಸ್ವಯಂಪ್ರಕಾಶ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಗದಗ ಜಿಲ್ಲೆಯ ಮುಂಡರಗಿ ಅನ್ನದಾನೀಶ್ವರ ಮಠದ ಅನ್ನದಾನೀಶ್ವರ ಶಿವಯೋಗಿ ಸ್ವಾಮೀಜಿ, ಬಸವಕಲ್ಯಾಣದ ರಂಭಾಪುರಿ ಶಾಖಾಮಠದ ಅಭಿನವ ಘನಲಿಂಗ ರುದ್ರಮುನಿ ಸ್ವಾಮೀಜಿ, ಕಲಬುರಗಿ ಜಿಲ್ಲೆಯ ನಾಲವಾರ ಕೋರಿಸಿದ್ದೇಶ್ವರ ಸಂಸ್ಥಾನಮಠದ ಸಿದ್ಧತೋಟೇಂದ್ರ ಶಿವಾಚಾರ್ಯ ಸ್ವಾಮೀಜಿ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಯು.ನಾಯಕ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಲಾ ಶಿಕ್ಷಕಿ ಶಾಂತಾ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಡಿಸೆಂಬರ್‌ನಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.