ADVERTISEMENT

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅನುಮತಿಗೆ ವಿಳಂಬ: CM ಪ್ರತಿಕೃತಿ ದಹನ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2023, 13:59 IST
Last Updated 15 ಸೆಪ್ಟೆಂಬರ್ 2023, 13:59 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ಸುಡುತ್ತಿರುವುದು– ಪ್ರಜಾವಾಣಿ ಚಿತ್ರ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಯನ್ನು ಸುಡುತ್ತಿರುವುದು– ಪ್ರಜಾವಾಣಿ ಚಿತ್ರ

   

ಹುಬ್ಬಳ್ಳಿ: ನಗರದ ರಾಣಿ ಚನ್ನಮ್ಮ ಮೈದಾನ(ಈದ್ಗಾ)ದಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆ ಆಯುಕ್ತರು ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಿಜೆಪಿ ಮತ್ತು ವಿವಿಧ ಹಿಂದೂ ಸಂಘಟನೆ ಕಾರ್ಯಕರ್ತರು ಮಹಾನಗರ ಪಾಲಿಕೆ ಎದುರು ರಸ್ತೆತಡೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿ, ರಾಹುಲ್ ಗಾಂಧಿ ಅವರ ಭಾವಚಿತ್ರ ಹಾಗೂ ಟೈರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿ, ಕಾಂಗ್ರೆಸ್ ಸರ್ಕಾರ ಹಾಗೂ ಪಾಲಿಕೆ ಆಯುಕ್ತರ ವಿರುದ್ಧ ಘೋಷಣೆ ಕೂಗಿದರು.

ADVERTISEMENT

ಸುಮಾರು ಅರ್ಧಗಂಟೆ ವಾಹನಗಳ ಸಂಚಾರ ತಡೆದ ಪರಿಣಾಮ, ಲ್ಯಾಮಿಂಗ್ಟನ್ ರಸ್ತೆ ಹಾಗೂ ಚನ್ನಮ್ಮ ವೃತ್ತದ ಸುತ್ತಲಿನ ರಸ್ತೆಗಳು ವಾಹನ ದಟ್ಟಣೆಯಿಂದ ಕೂಡಿದ್ದವು. ಪ್ರತಿಭಟನಾಕಾರರು ಪಾಲಿಕೆ ಆಯುಕ್ತರ ಕಚೇರಿಗೆ ತೆರಳಿ ಪ್ರತಿಭಟನೆ ಮುಂದುವರಿಸಿದ್ದಾರೆ.

ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯರಾದ ಶಿವು ಮೆಣಸಿನಕಾಯಿ, ರಾಜಣ್ಣ ಕೊರವಿ, ರಮೇಶ ಕೌಜಗೇರಿ, ಮೀನಾಕ್ಷಿ ವಂಟಮೂರಿ, ಬೀರಪ್ಪ ಖಂಡೆಕರ, ಸಂತೋಷ ಚವ್ಹಾಣ್, ಬಿಜೆಪಿ ಮುಖಂಡರಾದ ಶಿವಾನಂದ ಮುತ್ತಣ್ಣವರ, ರಂಗಾ ಬದ್ದಿ, ಅಶೋಕ ವಾಲ್ಮೀಕಿ, ರಾಜು ಕಾಳೆ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.