ಹುಬ್ಬಳ್ಳಿ: ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಪ್ರತ್ಯೇಕ ಅಡ್ಡೆಗಳ ಮೇಲೆ ದಾಳಿ ನಡೆಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ ₹17,500 ವಶಪಡಿಸಿಕೊಂಡಿದ್ದಾರೆ.
ಶನಿವಾರ ನಡೆದ ವಿಶ್ವಕಪ್ ಕ್ರಿಕೆಟ್ ನ ಭಾರತ -ಪಾಕಿಸ್ತಾನ ಪಂದ್ಯದ ವೇಳೆ ಆರೋಪಿಗಳು ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಹೆಗ್ಗೇರಿಯ ಸಿದ್ಧಾರೂಢ ನಗರ, ಅರವಿಂದ ನಗರದ ಹಾಗೂ ಆನಂದ ನಗರದ ಅಡ್ಡೆಗಳ ಮೇಲೆ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣಗಳು ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.