ADVERTISEMENT

ಅಲ್ಪಸಂಖ್ಯಾತರ ಮತಗಳಿಕೆಗೆ ಆರ್‌ಎಸ್‌ಎಸ್ ವಿರುದ್ಧ ಟೀಕೆ: ಸಚಿವ ಪ್ರಲ್ಹಾದ ಜೋಶಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2021, 19:31 IST
Last Updated 16 ಅಕ್ಟೋಬರ್ 2021, 19:31 IST
ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕೇಂದ್ರ ಸಚಿವ ಪ್ರಲ್ಹಾದ ಜೋಶಿ   

ಧಾರವಾಡ: ‘ಅಲ್ಪಸಂಖ್ಯಾತರ ಮತ ಪಡೆಯಲು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್‌ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ ನಾವು ಮುಸ್ಲಿಂ ಸೇರಿದಂತೆ ಯಾವುದೇ ಸಮುದಾಯದ ವಿರೋಧಿಗಳಲ್ಲ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕ ಸಾಂದ್ರಕ ಘಟಕಕ್ಕೆ ಶನಿವಾರ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಮುಗ್ಧ ಮುಸ್ಲಿಮರ ಮತಕ್ಕಾಗಿ ಆರ್‌ಎಸ್‌ಎಸ್ ಹಾಗೂ ಬಿಜೆಪಿಯನ್ನು ಭೂತದಂತೆ ಇವರು ತೋರಿಸುತ್ತಿದ್ದಾರೆ. ಇವರ ಎಲ್ಲಾ ಮತ ಬ್ಯಾಂಕುಗಳು ಕಡಿಮೆಯಾಗುತ್ತಿರುವುದರಿಂದ ಈ ತಂತ್ರ ಹೂಡಿದ್ದಾರೆ’ ಎಂದು ಟೀಕಿಸಿದರು.

ADVERTISEMENT

ಕುಮಾರಸ್ವಾಮಿಗೆ ಆರ್‌ಎಸ್‌ಎಸ್‌ ಗಂಧಗಾಳಿ ಗೊತ್ತಿಲ್ಲ: ಸಚಿವ ಅಶೋಕ

ದಾವಣಗೆರೆ: ‘ಆರ್‌.ಎಸ್‌.ಎಸ್‌ ಬಗ್ಗೆ ಗಂಧಗಾಳಿಯೂ ಗೊತ್ತಿಲ್ಲದ ಎಚ್.ಡಿ. ಕುಮಾರಸ್ವಾಮಿ ಯಾವುದೋ ಪುಸ್ತಕ ಓದಿ, ಅದೇ ಸತ್ಯ ಅಂದುಕೊಂಡಿದ್ದಾರೆ. ಇದು ಕುರುಡ ಆನೆಯ ಬಾಲ ಹಿಡಿದು, ಅದೇ ಆನೆ ಸೊಂಡಿಲು ಅಂದುಕೊಂಡಂತೆ ಆಗಿದೆ’ ಎಂದು ಸಚಿವ ಆರ್.ಅಶೋಕ ಅವರು ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.