ADVERTISEMENT

ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಇಂದು

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2022, 4:12 IST
Last Updated 21 ಮಾರ್ಚ್ 2022, 4:12 IST

ಕಲಘಟಗಿ: ತಾಲ್ಲೂಕಿನ ಮುಕ್ಕಲ ಗ್ರಾಮದಲ್ಲಿ ಮಾ.21ರಂದು ಜಿಲ್ಲಾಧಿಕಾರಿ ನಿತೀಶ್‌ ಪಾಟೀಲ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಗ್ರಾಮಕ್ಕೆ ಆಗಮಿಸಲಿರುವ ಅವರು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕೃಷಿ ಸಲಕರಣೆ ವಿತರಣೆ, ತೋಟಗಾರಿಕೆ ಇಲಾಖೆಯಿಂದ ಎಸ್.ಸಿ, ಎಸ್.ಟಿ ರೈತರಿಗೆ ಬೀಜದ ಕಿಟ್‌ ವಿತರಣೆ ಮಾಡಲಿದ್ದಾರೆ.

ಗ್ರಾಮ ಲೆಕ್ಕಾಧಿಕಾರಿಗಳ ಚಾವಡಿ ಉದ್ಘಾಟನೆ, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ.

ಮಧ್ಯಾಹ್ನ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳ ಅರ್ಜಿ ಸ್ವೀಕಾರ ಮತ್ತು ಪರಿಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸುಕನ್ಯಾ ಸಮೃದ್ಧಿ ಪಾಸ್ ಬುಕ್, ಸಾಮಾಜಿಕ ಭದ್ರತಾ ಯೋಜನೆಗಳ ಪಿಂಚಣಿ ಆದೇಶದ ಪ್ರತಿ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ, ಇ ಶ್ರಮ ಕಾರ್ಡ್, ಪರಿಹಾರದ ಚೆಕ್ ವಿತರಣೆ ಮಾಡಲಿದ್ದಾರೆ.

ADVERTISEMENT

ಕಾರ್ಯಕ್ರಮದ ಅಧ್ಯಕ್ಷತೆ ಮುಕ್ಕಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಿಂಗರಡ್ಡಿ ನಡುವಿನಮನಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ, ತಾಲ್ಲೂಕು ತಹಶೀಲ್ದಾರ್‌ ಯಲ್ಲಪ್ಪ ಗೊಣ್ಣೆನವರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಪುತ್ರಪ್ಪ ಮಠಪತಿ ಹಾಗೂ ಇನ್ನಿತರ ಇಲಾಖೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸದಸ್ಯರು, ಸುತ್ತಮುತ್ತಲ ಗ್ರಾಮಸ್ಥರು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.